12:23 AM Wednesday 22 - October 2025

ಶಾಲೆ ಆರಂಭವಾಗಿ ವಾರ ಕಳೆದರೂ ವಿದ್ಯಾರ್ಥಿಗಳ ಕೈ ಸೇರಿಲ್ಲ ಪಠ್ಯ ಪುಸ್ತಕ!

school books
06/06/2025

ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿ ಒಂದು ವಾರ ಕಳೆದರೂ ಇನ್ನೂ ಪಠ್ಯ ಪುಸ್ತಕಗಳು ವಿದ್ಯಾರ್ಥಿಗಳ ಕೈ ಸೇರಿಲ್ಲ.

ಕನ್ನಡ ಮಾಧ್ಯಮದ ಶೇ 20 ವಿದ್ಯಾರ್ಥಿಗಳಿಗೂ ಪಠ್ಯಪುಸ್ತಕ ಇನ್ನಷ್ಟೇ ಪೂರೈಕೆಯಾಗಬೇಕಿದೆ. ಬೆಂಗಳೂರಿನ ಶಾಲೆಗಳ ಸ್ಥಿತಿಗತಿಯೇ ಹೀಗಾದರೆ, ಬೇರೆ ಜಿಲ್ಲೆಗಳ ಶಾಲೆಗಳ ಕಥೆ ಏನು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆ ಆರಂಭದ ದಿನವೇ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ಕೊಡುತ್ತೇವೆ. ಈ ವರ್ಷ ಪಠ್ಯಪುಸ್ತಕ ತಡ ಮಾಡುವುದಿಲ್ಲ ಎಂದಿದ್ದ ಶಿಕ್ಷಣ ಇಲಾಖೆ ದಿವ್ಯ ನಿರ್ಲಕ್ಷ್ಯವಹಿಸಿದೆ. ಪಠ್ಯ ಪುಸ್ತಕಗಳು ಇಲ್ಲದೆ ತರಗತಿ ನಡೆಸಲು ಸಾಧ್ಯವಾಗದ ಶಿಕ್ಷಕರು ಸೇತುಬಂಧ ಕಾರ್ಯಕ್ರಮ ಮುಂದುವರೆಸಿದ್ದಾರೆ.

ಇನ್ನು ಶಿಕ್ಷಣ ಇಲಾಖೆಯ ನಡೆಯ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟವೂ ಆಕ್ರೋಶ ವ್ಯಕ್ತಪಡಿಸಿವೆ. ಪಠ್ಯಪುಸ್ತಕಕ್ಕೆ ಸರ್ಕಾರಕ್ಕೆ ಕಳೆದ 6 ತಿಂಗಳ ಹಿಂದೆಯೇ ಹಣ ನೀಡಿದ್ದೇವೆ. ಆದರೆ ಶಾಲೆ ಶುರುವಾಗಿ ಇಷ್ಟು ದಿನವಾದರೂ ಪಠ್ಯಪುಸ್ತಕ ಪೂರೈಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಡಾ. ತ್ರಿಲೋಕಚಂದ್ರ,    ಈಗಾಗಲೇ ಶೇ 83 ರಷ್ಟು ಪಠ್ಯಪುಸ್ತಕ ಪೂರೈಕೆ ಮಾಡಲಾಗಿದೆ. ಉಳಿದವುಗಳನ್ನು ಇನ್ನೊಂದು ವಾರದಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version