ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ತೀವಿ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಕಿಡಿ

ಇಸ್ಲಾಮಾಬಾದ್: ಆಪರೇಷನ್ ಸಿಂಧೂರ ನಡೆಸಿದ ಭಾರತದ ನಡೆಯ ವಿರುದ್ಧ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕಿಡಿಕಾರಿದ್ದಾರೆ. ಭಾರತ ತೀವ್ರ ಪರಿಣಾಮಗಳನ್ನ ಎದುರಿಸಬೇಕಾಗುತ್ತದೆ, ಮಾಡಿದ ತಪ್ಪಿಗೆ ಭಾರೀ ಬೆಲೆ ತೆರಬೇಕಾಗುತ್ತದೆ. ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ತೀವಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಹಲ್ಗಾಮ್ ದಾಳಿ ನಡೆದಾಗ ನಾನು ಟರ್ಕಿಗೆ ಭೇಟಿ ನೀಡಿದ್ದೆ. ಈ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಆಗಲೇ ನಾವು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ, ತನಿಖೆಗೆ ಸಹಕರಿಸಲೂ ಸಿದ್ಧರಿದ್ದೇವೆ ಎಂದು ಹೇಳಿದ್ದೆವು. ಆದ್ರೆ ಭಾರತ ನಮ್ಮ ಸ್ಪಷ್ಟನೆಯನ್ನು ಸ್ವೀಕರಿಸದೇ ದಾಳಿ ನಡೆಸಿದೆ ಎಂದು ಅವರು ಆರೋಪಿಸಿದರು.
ಭಾರತದ ದಾಳಿಯನ್ನು ವಿಫಲಗೊಳಿಸಿದ್ದೇವೆ. ಭಾರತದ ದಾಳಿ ಅಚ್ಚರಿ ಮೂಡಿಸಿತು. ಇಡೀ ದೇಶವನ್ನೇ ಬೆಚ್ಚಿಬೀಳಿಸಿತು. ಭಾರತೀಯ ವಿಮಾನಗಳು ತಮ್ಮ ದೇಶವನ್ನು ಪ್ರವೇಶಿಸಿದರೆ ಸಮುದ್ರಕ್ಕೆ ಎಸೆಯಲು ಪಾಕಿಸ್ತಾನ ವಾಯುಪಡೆ ಸಿದ್ಧವಾಗಿದೆ ಮತ್ತು ಅದಕ್ಕಾಗಿ ಕಾಯುತ್ತಿದೆ ಎಂದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD