ಭಾರತದ ಪ್ರತಿಯೊಬ್ಬ ಮುಸಲ್ಮಾನರು ಸಿಎಎಯನ್ನು ಸ್ವಾಗತಿಸಬೇಕು: ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ

ಬರೇಲಿ, ಉತ್ತರ ಪ್ರದೇಶ: ಪೌರತ್ವ ತಿದ್ದುಪಡಿ ಕಾಯ್ದೆ ಮುಸ್ಲಿಮರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರವು ಅಧಿಸೂಚನೆ ಹೊರಡಿಸಿದ ಕೆಲವು ಗಂಟೆಗಳ ನಂತರ ಪ್ರತಿಕ್ರಿಯಿಸಿದ ಅವರು, ಭಾರತ ಸರ್ಕಾರವು ಸಿಎಎ ಕಾನೂನನ್ನು ಜಾರಿಗೆ ತಂದಿದೆ. ನಾನು ಈ ಕಾನೂನನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.
ಈ ಹಿಂದೆಯೇ ಈ ಕಾನೂನು ಬರಬೇಕಿತ್ತು ಎಂದ ಅವರು ಈ ಕಾನೂನಿನ ಬಗ್ಗೆ ಮುಸ್ಲಿಮ್ ಸಮಾಜದಲ್ಲಿ ಸಾಕಷ್ಟು ತಪ್ಪು ತಿಳುವಳಿಕೆಗಳಿವೆ ಎಂದು ಹೇಳಿದ್ದಾರೆ.
ಭಾರತದಲ್ಲಿರುವ ಕೋಟ್ಯಾಂತರ ಮುಸ್ಲಿಮರಿಗೆ ಈ ಕಾನೂನಿನಿಂದ ಯಾವುದೇ ಸಮಸ್ಯೆ ಇಲ್ಲ, ಈ ಕಾನೂನು ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ. ಕಳೆದ ವರ್ಷ ಈ ಕಾನೂನಿನ ಬಗ್ಗೆ ಸಾಕಷ್ಟು ಪ್ರತಿಭಟನೆಗಳು ನಡೆದಿರುವುದನ್ನು ನಾವು ಕಾಣಬಹುದಾಗಿದೆ. ಕೆಲವು ರಾಜಕೀಯ ವ್ಯಕ್ತಿಗಳು ಮುಸ್ಲಿಮರಲ್ಲಿ ಸಿಎಎ ಬಗ್ಗೆ ತಪ್ಪು ತಿಳುವಳಿಕೆ ಹುಟ್ಟುಹಾಕಿದ್ದಾರೆ ಎಂದು ಅವರು ಆರೋಪಿಸಿದರು.
ಭಾರತದ ಪ್ರತಿಯೊಬ್ಬ ಮುಸಲ್ಮಾನನೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸ್ವಾಗತಿಸಬೇಕು ಎಂದು ಅವರು ಇದೇ ವೇಳೆ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth