ಐಎಸ್‌ಐಗೆ ಬೇಹುಗಾರಿಕೆ ನಡೆಸಿದ ಅಪರಾಧ: ಏರೋಸ್ಪೇಸ್‌ನ ಮಾಜಿ ಇಂಜಿನಿಯರ್ ಗೆ ಜೀವಾವಧಿ ಶಿಕ್ಷೆ - Mahanayaka

ಐಎಸ್‌ಐಗೆ ಬೇಹುಗಾರಿಕೆ ನಡೆಸಿದ ಅಪರಾಧ: ಏರೋಸ್ಪೇಸ್‌ನ ಮಾಜಿ ಇಂಜಿನಿಯರ್ ಗೆ ಜೀವಾವಧಿ ಶಿಕ್ಷೆ

03/06/2024

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಬೇಹುಗಾರಿಕೆ ನಡೆಸಿದ ಅಪರಾಧಕ್ಕಾಗಿ ಬ್ರಹ್ಮೋಸ್ ಏರೋಸ್ಪೇಸ್‌ನ ಮಾಜಿ ಇಂಜಿನಿಯರ್ ನಿಶಾಂತ್ ಅಗರ್ವಾಲ್‌ ಎಂಬಾತ ಜೀವಾವಧಿ ಶಿಕ್ಷೆ ಒಳಗಾಗಿದ್ದಾನೆ. ಆತನನ್ನು 2018 ರಲ್ಲಿ ಮಿಲಿಟರಿ ಗುಪ್ತಚರ ಮತ್ತು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳಗಳು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದವು.

ನಾಗ್ಪುರದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ನಿಶಾಂತ್ ಅಗರ್ವಾಲ್‌ನನ್ನು ವಿಚಾರಣೆ ನಡೆಸಲಾಗಿದ್ದು, ವಿಚಾರಣೆ ವೇಳೆ ನಿಶಾಂತ್ ಅಗರ್ವಾಲ್ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಐಟಿ ಕಾಯ್ದೆಯ ಸೆಕ್ಷನ್ 66 (ಎಫ್) ಮತ್ತು ಅಧಿಕೃತ ರಹಸ್ಯ ಕಾಯ್ದೆಯ (ಒಎಸ್‌ಎ) ವಿವಿಧ ಸೆಕ್ಷನ್‌ಗಳು ಹಾಗೂ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 235ರ ಅಡಿಯಲ್ಲಿ ಅಗರ್ವಾಲ್‌ನನ್ನು ದೋಷಿ ಎಂದು ಪರಿಗಣಿಸಿ ನ್ಯಾಯಾಧೀಶ ಎಂ.ವಿ.ದೇಶಪಾಂಡೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ನಿಶಾಂತ್ ಅಗರ್ವಾಲ್ ಅವರು ನಾಗ್ಪುರದಲ್ಲಿರುವ ಬ್ರಹ್ಮೋಸ್ ಏರೋಸ್ಪೇಸ್‌ನ ತಾಂತ್ರಿಕ ಸಂಶೋಧನಾ ವಿಭಾಗದಲ್ಲಿ ೪ ವರ್ಷಗಳ ಕಾಲ ಹಿರಿಯ ಸಿಸ್ಟಮ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸಿದ್ದರು. ಆತನ ವಿರುದ್ಧ ಪಾಕಿಸ್ತಾನದ ಐಎಸ್‌ಐಗೆ ತಾಂತ್ರಿಕ ಮಾಹಿತಿಯನ್ನು ಸೋರಿಕೆ ಮಾಡಿದ್ದ ಆರೋಪ ಕೇಳಿ ಬಂದಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ