ಮನೆ ಹೊರಗೆ ಇದ್ದಕ್ಕಿದ್ದಂತೆ ಬಾಂಬ್ ಸ್ಫೋಟ: ದುರಂತದಲ್ಲಿ ಮಾಜಿ ಶಾಸಕರೋರ್ವರ ಪತ್ನಿ ಸಾವು
ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯ ಮನೆಯ ಹೊರಗೆ ಬಾಂಬ್ ಸ್ಫೋಟದಲ್ಲಿ ಮಣಿಪುರದ ಮಾಜಿ ಶಾಸಕ ಯಾಮ್ಥಾಂಗ್ ಹಾಕಿಪ್ ಅವರ ಪತ್ನಿ ಸಾವನ್ನಪ್ಪಿದ್ದಾರೆ.ಎಕೌ ಮುಲ್ಲಮ್ ಗ್ರಾಮದ ಸೈಕುಲ್ ನ ಮಾಜಿ ಶಾಸಕ ಹಾಕಿಪ್ ಅವರ ಮನೆಯ ಬಳಿ ಈ ಘಟನೆ ನಡೆದಿದೆ.
ಸಂತ್ರಸ್ತೆ ಸಪಮ್ ಚಾರುಬಾಲಾ (59) ಸೇರಿದಂತೆ ಕುಟುಂಬದವರು ಮನೆಯ ಹೊರಗೆ ಸ್ವಚ್ಛಗೊಳಿಸುವ ಕೆಲಸದಲ್ಲಿ ತೊಡಗಿದ್ದಾಗ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ ಎಂದು ಸೈಖುಲ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಚಾರುಬಾಲಾರ ಇವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆದರೆ ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದರು.
ಪ್ರಾಥಮಿಕ ತನಿಖೆಯ ಪ್ರಕಾರ, ಇತ್ತೀಚೆಗೆ ಖಾಲಿ ಮಾಡಲಾದ ಪಕ್ಕದ ಮನೆಯ ಕಾಂಪೌಂಡ್ ನಲ್ಲಿ ಚಾರುಬಾಲಾ ಕೆಲವು ತ್ಯಾಜ್ಯ ವಸ್ತುಗಳನ್ನು ಸುಡುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ ಎಂದು ಪೊಲೀಸ್ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ಕುರಿತು ತನಿಖೆ ನಡೆಯುತ್ತಿದ್ದು, ಶಾಸಕ ಹಾಕಿಪ್ ಅವರ ಮನೆಯಲ್ಲಿ ಬಾಂಬ್ ಅನ್ನು ಯಾರು ಇಟ್ಟಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಹಾಕಿಪ್ ಮತ್ತು ಅವರ ಕುಟುಂಬವು ಈ ಹಿಂದೆ ಯಾವುದೇ ಬೆದರಿಕೆಗಳನ್ನು ಎದುರಿಸಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಈ ಕುರಿತು ವದಂತಿಗಳನ್ನು ಹರಡಬೇಡಿ ಮತ್ತು ಈ ಘಟನೆಯನ್ನು ರಾಜ್ಯದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದೊಂದಿಗೆ ಜೋಡಿಸಬೇಡಿ ಎಂದು ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ.
ಕಳೆದ ವರ್ಷ ಮೇ 3ರಂದು ಇಂಫಾಲ್ ಕಣಿವೆ ಮೂಲದ ಮೈಟೈಸ್ ಮತ್ತು ಪಕ್ಕದ ಬೆಟ್ಟಗಳ ಕುಕಿಗಳ ನಡುವೆ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth