10:30 AM Thursday 21 - August 2025

ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಸಾವಿಗೆ ಶರಣು: ಕಾರಣ ನಿಗೂಢ

kg prathap kumar
08/07/2024

ಹಾವೇರಿ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ರಸ್ತೆ ಬದಿ ಕಾರು ನಿಲ್ಲಿಸಿ, ವಿಷ ಸೇವಿಸಿ ಸಾವಿಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ.

ಕೆ.ಜಿ. ಪ್ರತಾಪ್‌ ಕುಮಾರ್‌ (41) ಸಾವಿಗೆ ಶರಣಾದವರಾಗಿದ್ದಾರೆ. ಇವರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದರು ಎಂದು ತಿಳಿದು ಬಂದಿದೆ. ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹೊನ್ನಾಳಿ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

15 ವರ್ಷದ ಹಿಂದೆ ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯಳನ್ನು  ಕೆ.ಜಿ. ಪ್ರತಾಪ್‌ ಕುಮಾರ್‌ ಮದುವೆಯಾಗಿದ್ದರು. ಆದ್ರೆ, ಇದೀಗ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

KA 68 M 1458 ನಂಬರಿನ Venue ಕಾರಿನಲ್ಲಿ ಬಂದಿದ್ದ ಪ್ರತಾಪಕುಮಾರ, ಹರಿಹರ–ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಬರುವ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ಕಾರಿನಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version