ದುರಂತ: ಅಟ್ಲಾಸ್ ಸೈಕಲ್ಸ್ ಮಾಜಿ ಅಧ್ಯಕ್ಷ ಆತ್ಮಹತ್ಯೆ

ಅಟ್ಲಾಸ್ ಸೈಕಲ್ಸ್ ನ ಮಾಜಿ ಅಧ್ಯಕ್ಷ ಸಲೀಲ್ ಕಪೂರ್ ದೆಹಲಿಯ ಎಪಿಜೆ ಅಬ್ದುಲ್ ಕಲಾಂ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಮಧ್ಯಾಹ್ನ 2.30 ರ ಸುಮಾರಿಗೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಪೂರ್ ಅವರ ಮನೆಯಿಂದ ಡೆತ್ ನೋಟನ್ನು ಸಹ ವಶಪಡಿಸಿಕೊಂಡಿದ್ದಾರೆ. ಕಪೂರ್ ತನ್ನ ಮೂರು ಅಂತಸ್ತಿನ ಮನೆಯ ಮುಂದಿನ ಪ್ರದೇಶದಲ್ಲಿ ಕುಳಿತಿದ್ದಾಗ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಪೊಲೀಸರು ಪತ್ತೆ ಮಾಡಿದ ಒಂದು ಪುಟದ ಡೆತ್ ನೋಟಲ್ಲಿ, ಕಪೂರ್ ಕೆಲವು ಜನರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅಟ್ಲಾಸ್ ಸೈಕಲ್ಸ್ ನ ಮಾಜಿ ಅಧ್ಯಕ್ಷ ಸಲೀಲ್ ಕಪೂರ್ ಅವರು ಡಾ.ಎಪಿಜೆ ಅಬ್ದುಲ್ ಕಲಾಂ ಲೇನ್ ನಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸ್ ತಂಡವಿದೆ. ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಳ್ಳಲಾಗಿದ್ದು, ಕೆಲವರ ವಿರುದ್ಧ ಕಿರುಕುಳದ ಆರೋಪಗಳನ್ನು ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth