ಪರೀಕ್ಷೆಗೆ ಹೋದ 15 ವರ್ಷದ ಹುಡುಗಿಗೆ ಮದುವೆ : ವರ ಬಂಧನ - Mahanayaka
10:39 PM Tuesday 14 - October 2025

ಪರೀಕ್ಷೆಗೆ ಹೋದ 15 ವರ್ಷದ ಹುಡುಗಿಗೆ ಮದುವೆ : ವರ ಬಂಧನ

marriage
21/03/2022

ಮುಂಬೈ: ಹತ್ತನೇ ತರಗತಿ ಪರೀಕ್ಷೆಗೆ ತೆರಳಿದ್ದ 15 ವರ್ಷದ ಬಾಲಕಿಯನ್ನು 21 ವರ್ಷ ವಯಸ್ಸಿನ ಯುವಕನೋರ್ವ ವಿವಾಹವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಯುವಕನನ್ನು ಕಲಾಚೌಕಿ ಪೊಲೀಸರು ಬಂಧಿಸಿದ್ದಾರೆ.


Provided by

ಪರೀಕ್ಷೆಗೆಂದು ತೆರಳಿದ್ದ ಬಾಲಕಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಘಟನೆ ನಡೆದ ಮರುದಿನ ಬಾಲಕಿ ಮನೆಗೆ ಮರಳಿದ್ದು, ಶಿರಸಿಯಲ್ಲಿರುವ ತನ್ನ ಮನೆಯವರಿಗೆ ತನಗೂ ಮತ್ತು ಯುವಕನಿಗೂ ವಿವಾಹವಾಗಿದೆ ಎಂದು ತಿಳಿಸಿದ್ದಾಳೆ.

ಇವರಿಬ್ಬರು ಈ ಹಿಂದೆಯೇ ಆತ್ಮೀಯರಾಗಿದ್ದು   ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.  ಮದುವೆಯನ್ನು ಆಯೋಜಿಸಲು ಸಹಾಯ ಮಾಡಿದ ವ್ಯಕ್ತಿಗಳನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಘಟನೆಗೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದು, ಯುವಕನನ್ನು ತೀವ್ರ ವಿಚಾರಣೆ ಮಾಡುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರೈಲ್ವೇ ನಿಲ್ದಾಣದ ಶೌಚಾಲಯದಲ್ಲಿ ಯುವತಿ ಮೇಲೆ ಅತ್ಯಾಚಾರ

ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಹಿಂದಿಕ್ಕಿದ  ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್

ಪಾನ್‌-ಆಧಾರ್ ಲಿಂಕ್: ಮಾರ್ಚ್ 31ಕೊನೆ ದಿನಾಂಕ

ಕ್ರಿಶ್ಚಿಯನ್ ಪಾದ್ರಿಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಹತ್ಯೆ

ಆಟೋಗೆ ಬಣ್ಣ ತುಂಬಿದ ಬಲೂನ್ ಎಸೆದ ಕಿಡಿಗೇಡಿ: ರಸ್ತೆಯಲ್ಲಿ ಮಗುಚಿ ಬಿದ್ದ ಆಟೋ | ವಿಡಿಯೋ ವೈರಲ್

 

ಇತ್ತೀಚಿನ ಸುದ್ದಿ