ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ - Mahanayaka
6:46 PM Wednesday 15 - October 2025

ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

susied
24/02/2022

ಚಿಕ್ಕಬಳ್ಳಾಪುರ: ಎಸ್ಸೆಸ್ಸೆಲ್ಸಿ ಸಿದ್ದತಾ ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ 1ನೇ ವಾರ್ಡ್‌‌ ನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.


Provided by

ಬೇಬಿ ಮೃತ ವಿದ್ಯಾರ್ಥಿನಿ. ಈಕೆ ವಾಪಸಂದ್ರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಬುಧವಾರ ಆರಂಭವಾಗಿರುವ ಪೂರ್ವ ಸಿದ್ಧತಾ ಪರೀಕ್ಷೆಗೆ ಹಾಜರಾಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ಬೇಬಿಯನ್ನು ಪರೀಕ್ಷೆಗೆ ಹಾಜರಾಗುವಂತೆ ಇಬ್ಬರು ವಿದ್ಯಾರ್ಥಿಗಳನ್ನು ಬೇಬಿ ಮನೆಗೆ ಕಳುಹಿಸಿದ್ದರು ಎನ್ನಲಾಗಿದೆ.

ಆದರೆ ಶಾಲೆಗೆ ಹೋಗಲು ಆಸಕ್ತಿ ಇಲ್ಲದ ಈಕೆ ಮನೆಯಲ್ಲಿ ಯಾರು ಇಲ್ಲ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪತ್ನಿ ಮೃತಪಟ್ಟಿದ್ದಾಳೆಂದು ರಸ್ತೆಬದಿಯಲ್ಲೇ ಎಸೆದು ಹೋದ ಪತಿ

‘ಓ ಅಂಟಾವಾ’ ಹಾಡನ್ನು ಹಾಡಿ ನೆಟ್ಟಿಗರ ಮನ ಗೆದ್ದ ಡಚ್​ ಮಹಿಳೆ

ಹರ್ಷ ಕೊಲೆ ಪ್ರಕರಣ: 6 ಮಂದಿ ಆರೋಪಿಗಳಿಗೆ ಮಾ. 7ರ ವರೆಗೆ ನ್ಯಾಯಾಂಗ ಬಂಧನ

ಉಕ್ರೇನ್ ವಿರುದ್ಧ ಯುದ್ಧ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಘೋಷಣೆ

ಸಾಲಬಾಧೆ: ಮಗಳನ್ನು ಕೊಂದು ತಂದೆ ಆತ್ಮಹತ್ಯೆ

 

ಇತ್ತೀಚಿನ ಸುದ್ದಿ