ಗಡಿಪಾರು: ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ಅರುಣ್ ಪುತ್ತಿಲಗೆ ನೋಟಿಸ್

arun puthila
02/06/2025

ಪುತ್ತೂರು: ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡುವ ಆದೇಶ ಹೊರಡಿಸುವ ಸಂಬಂಧ ವಿಚಾರಣೆಗೆ ಹಾಜರಾಗಲು ಪುತ್ತೂರು ಉಪ ವಿಭಾಗದ ದಂಡಾಧಿಕಾರಿ ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.

ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ  ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ:58ರಡಿ ನೋಟಿಸ್  ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂನ್ 6ರಂದು ನಿಗದಿಪಡಿಸಿದೆ. ಆದ್ದರಿಂದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ನೋಟಿಸ್ ನಲ್ಲಿ ಸೂಚನೆ ನೀಡಲಾಗಿದೆ.

ಈ ಪ್ರಕರಣದಲ್ಲಿ ಸ್ವತಃ ಅಥವಾ ನ್ಯಾಯವಾದಿಯ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದು. ವಿಚಾರಣೆಗೆ ಹಾಜರಾಗದಿದ್ದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version