ಪಾಕಿಸ್ತಾನಿಯರನ್ನು ಹೊರಹಾಕಿ: ರಾಜ್ಯಗಳಿಗೆ ಅಮಿತ್ ಶಾ ನಿರ್ದೇಶನ - Mahanayaka
11:04 AM Saturday 23 - August 2025

ಪಾಕಿಸ್ತಾನಿಯರನ್ನು ಹೊರಹಾಕಿ: ರಾಜ್ಯಗಳಿಗೆ ಅಮಿತ್ ಶಾ ನಿರ್ದೇಶನ

amith shah
25/04/2025


Provided by

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಏಪ್ರಿಲ್ 27ರೊಳಗೆ ಪಾಕಿಸ್ತಾನದ ಎಲ್ಲ ಪ್ರಜೆಗಳು ಭಾರತ ತೊರೆಯುವಂತೆ ಭಾರತ ಹೇಳಿದೆ. ವೈದ್ಯಕೀಯ ವೀಸಾ ಹೊಂದಿರುವವರಿಗೆ ಏಪ್ರಿಲ್ 29ರೊಳಗೆ ದೇಶ ತೊರೆಯಲು ಗಡುವು ನೀಡಲಾಗಿದೆ. ಈ ನಡುವೆ  ಕೇಂದ್ರ ಗೃಹ ಸಚಿವ ಅಮಿತ್ ಶಾ,  ಗಡುವು ಮೀರಿ ಭಾರತದಲ್ಲಿರುವ ಪಾಕಿಸ್ತಾನದ ನಾಗರಿಕರನ್ನು ನಿಮ್ಮ ರಾಜ್ಯಗಳಲ್ಲಿ ಉಳಿಯದಂತೆ ನೋಡಿಕೊಳ್ಳಿ ಎಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪಾಕ್ ಪ್ರಜೆಗಳನ್ನ ಗಡೀಪಾರು ಮಾಡುವಂತೆ ಅವರು ಸೂಚನೆ ನೀಡಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕ್ ಹಾಗೂ ಭಾರತದ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಪಾಕಿಸ್ಥಾನದೊಂದಿಗೆ ಭಾರತ ರಾಜತಾಂತ್ರಿಕ ಸಂಬಂಧ ಕಡಿದುಕೊಳ್ಳಲು ಮುಂದಾಗಿದೆ.

ಗುರುವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಭಾರತವು ಪ್ರತಿಯೊಬ್ಬ ಭಯೋತ್ಪಾದಕರನ್ನೂ ಗುರುತಿಸಿ ಶಿಕ್ಷಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ