ಪಾಪದ ಕೆಲಸ ಮಾಡಿದವರನ್ನು ಪಕ್ಷದಿಂದ ಒದ್ದೋಡಿಸಿ: ಒಳೇಟಿನ ವಿರುದ್ಧ ಸೋಮಣ್ಣ ಕಿಡಿಕಿಡಿ - Mahanayaka
7:26 PM Wednesday 19 - November 2025

ಪಾಪದ ಕೆಲಸ ಮಾಡಿದವರನ್ನು ಪಕ್ಷದಿಂದ ಒದ್ದೋಡಿಸಿ: ಒಳೇಟಿನ ವಿರುದ್ಧ ಸೋಮಣ್ಣ ಕಿಡಿಕಿಡಿ

somanna
17/05/2023

ಚಾಮರಾಜನಗರ: ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ಚಾಮರಾಜನಗರಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿ ಕಾರ್ಯಕರ್ತರಿಗೆ ಕೃತಜ್ಞತಾ ಸಭೆ ನಡೆಸಿದರು.

ಭಾಷಣದ ವೇಳೆ ತಮ್ಮ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ ಎಂದು ಆರೋಪಿಸಿದ ಸೋಮಣ್ಣ, ನನಗೆ ಮಾಡಿದ ಪಾಪದ ಕೆಲಸ ಬೇರೆ ಯಾರಿಗೂ ಮಾಡುವುದು ಬೇಡ, ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಚಪ್ಪಲಿಯಲ್ಲಿ ಹೊಡೀರಿ ಎಂದು ಕಿಡಿಕಾರಿದರು.

ಕೆಲ ಲೋಫರ್ ನನ್ ಮಕ್ಕಳು ಈ ಪಾಪದ ಕೆಲಸ ಮಾಡಿದ್ದಾರೆ, 7-8 ಮಂದಿಯಿಂದ ಈ ಸೋಲುಂಟಾಯಿತು, ನನ್ನ ಸಮಾಜದವರೇ ನನಗೇ ಕೈ ಕೊಟ್ಟರು, ಯಾರ್ಯಾರೋ ಬೋರ್ಡ್ ಅಧ್ಯಕ್ಷರು ಮಠಗಳಿಗೆ ದುಡ್ಡು ಕೊಟ್ಟು ಜನರ ದಿಕ್ಕು ತಪ್ಪಿಸಿದರು ಎಂದು ಬಿಜೆಪಿ ಮುಖಂಡರ ವಿರುದ್ಧ ಆರೋಪ ಮಾಡಿದರು.

ಈಗ ಅವರು ಒಳೇಟು ಕೊಟ್ಟರು, ಇವರು ಒಳೇಟು ಕೊಟ್ಟರು, ಕ್ರಮ ಕೈಗೊಳ್ಳಿ ಎನ್ನುತ್ತಿದ್ದೀರಿ, ಈ ಕೆಲಸವನ್ನು 6 ತಿಂಗಳ ಹಿಂದೆ ಮಾಡಬೇಕಿತ್ತು, ಆಗ ಮಾಡಲಿಲ್ಲ- ಈಗ ಮಾಡಿ ಎನ್ನುತ್ತಿದ್ದೀರಿ, ನಾನು ನಿಮ್ಮನ್ನು ನಂಬಿಕೊಂಡಿದ್ದೆ ತಪ್ಪಾಯಿತು. ಮಾದೇಶ್ವರನ ಅಣೆ…ನನ್ನ ಮಕ್ಕಳಾಣೆ ನಾನಾಗಿ ಇಲ್ಲಿಗೆ ಬರಲಿಲ್ಲ… ಹೈಕಮಾಂಡ್ ಹೇಳಿದ್ದರಿಂದ ಚಿನ್ನ ದಂತಹ ಗೋವಿಂದರಾಜ ನಗರ ಕ್ಷೇತ್ರ ಬಿಟ್ಟು ಇಲ್ಲಿಗೆ ಬಂದೆ. ಪಕ್ಷ ತಾಯಿಗೆ ಸಮಾನ ಪಕ್ಷ ದೊಳಗಿದ್ದು ದ್ರೋಹ ಬಗೆಯುವುದು ಎಷ್ಟರಮಟ್ಟಿಗೆ ಸರಿ ?? ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣಪ್ರಸಾದ್ ಅವರಿಗೆ ನೈತಿಕತೆ ಇದ್ದರೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರನ್ನು ಒದ್ದು ಓಡಿಸಿ ಎಂದು ಆಗ್ರಹಿಸಿದರು.

ಕೆಲವರು ಮನಸ್ಸು ಬಿಚ್ಚಿ ಮುಕ್ತ ಮನಸ್ಸಿನಿಂದ ಕೆಲಸ ಮಾಡಲಿಲ್ಲ.

ದೊಡ್ಡ ಸ್ಥಾನಕ್ಕೆ ಸೋಮಣ್ಣ ಹೋಗುತ್ತಾರೆ ಎಂದಿದ್ದೆ ಮುಳುವಾಯಿತು ಎಂದು ಪಕ್ಷದ ಕೆಲ ಮುಖಂಡರ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ