ದುಬಾರಿ ದ್ವಿಚಕ್ರ ವಾಹನ, ಮೊಬೈಲ್ ಕಳವು ಪ್ರಕರಣ: ತಮಿಳುನಾಡು ಮೂಲದ ಇಬ್ಬರ ಬಂಧನ
ಬೆಂಗಳೂರು: ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರು ದ್ವಿ–ಚಕ್ರ ವಾಹನ ಮತ್ತು ಮೊಬೈಲ್ ಫೋನ್ ಕಳ್ಳನನ್ನು ಬಂಧಿಸಿದ್ದಾರೆ.
ಮೋಜು ಮತ್ತು ಮಸ್ತಿಗಾಗಿ ದ್ವಿಚಕ್ರ ವಾಹನ ಮೊಬೈಲ್ ಫೋನ್ ಗಳನ್ನು ಕಳ್ಳತನ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರು ಆರೋಪಿಗಳನ್ನು ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರು ದಸ್ತಗಿರಿ ಮಾಡಿ, ಅವರಿಂದ ಸುಮಾರು 19 ಲಕ್ಷ ಮೌಲ್ಯದ 10 ಐಷಾರಾಮಿ ದ್ವಿ–ಚಕ್ರ ವಾಹನ, ಆಟೋ ರಿಕ್ಷಾ ಹಾಗೂ 1 ಲಕ್ಷದ 20 ಸಾವಿರ ರೂ ಮೌಲ್ಯದ 19 ವಿವಿಧ ಕಂಪನಿಯ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ನಗರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಕೃಷ್ಟತಾಂತ ಮಾರ್ಗದರ್ಶನದಲ್ಲಿ ವಿ.ವಿ.ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ನಾ ರವರ ಉಸ್ತುವಾರಿಯಲ್ಲಿ, ಬಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶ.ಮಿರ್ಜಾ ಅವರ ನೇತೃತ್ವದಲ್ಲಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw
LIVE | ವಿಡಿಯೋ ನೋಡಿ:





























