ಅಯ್ಯೋ ಸೊಮಾಲಿಯಾ: ಭೀಕರ ಸ್ಪೋಟಕ್ಕೆ 27 ಮಂದಿ ಸಾವು: ಸಾವನ್ನಪ್ಪಿದವರಲ್ಲಿ ಮಕ್ಕಳೇ ಹೆಚ್ಚು - Mahanayaka
11:06 PM Thursday 21 - August 2025

ಅಯ್ಯೋ ಸೊಮಾಲಿಯಾ: ಭೀಕರ ಸ್ಪೋಟಕ್ಕೆ 27 ಮಂದಿ ಸಾವು: ಸಾವನ್ನಪ್ಪಿದವರಲ್ಲಿ ಮಕ್ಕಳೇ ಹೆಚ್ಚು

10/06/2023


Provided by

ಜಗತ್ತಿನ ಅತ್ಯಂತ ಬಡರಾಷ್ಟ್ರಗಳಲ್ಲಿ ಒಂದಾಗಿರುವ ಸೊಮಾಲಿಯಾದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಪರಿಣಾಮ 25 ಮಕ್ಕಳು ಸೇರಿದಂತೆ 27 ಮಂದಿ ಸಾವಿಗೀಡಾಗಿದ್ದಾರೆ.

ಪೂರ್ವ ಲೋವರ್ ಶಾಬೆಲ್ಲೆಯ ಜನಾಲೆ ಪ್ರದೇಶದ ಮುರಾಲೆ ಗ್ರಾಮದ ಫುಟ್ಬಾಲ್ ಮೈದಾನದಲ್ಲಿ ಈ ಸ್ಫೋಟ ಸಂಭವಿಸಿದೆ. ಹಳೆಯ ಬಾಂಬ್‌ನ ಅವಶೇಷಗಳು ಸ್ಫೋಟಗೊಂಡು ಈ ದುರ್ಘಟನೆ ನಡೆದಿದೆ. ಸ್ಫೋಟದಲ್ಲಿ 53 ಮಕ್ಕಳು ಗಾಯಗೊಂಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಕ್ರೊಯೊಲಿ ಪಟ್ಟಣದ ಉಪ ಜಿಲ್ಲಾಧಿಕಾರಿ ಅಬ್ದಿ ಅಹ್ಮದ್ ಅಲಿ, ಹಳ್ಳಿಯೊಂದರ ತೆರೆದ ಮೈದಾನದಲ್ಲಿ ಮಕ್ಕಳು ಆಡುತ್ತಿದ್ದಾಗ ನೆಲಬಾಂಬ್‌ಗಳಂತಹ ಯುದ್ಧದ ಸ್ಫೋಟಕ ಅವಶೇಷಗಳು ಸ್ಫೋಟಿಸಿವೆ ಎಂದು ತಿಳಿಸಿದ್ದಾರೆ.

ಮೃತರ ಪೈಕಿ 22 ಮಕ್ಕಳ ಶವಗಳನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಇನ್ನಿಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಷ್ಟರಲ್ಲಾಗಲೇ ಅವರೂ ಕೊನೆಯುಸಿರೆಳೆದಿದ್ದರು. ಮೊಗಾದಿಶುಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಮತ್ತೊಂದು ಮಗು ಸಾವಿಗೀಡಾಗಿದೆ. ಒಟ್ಟಿನಲ್ಲಿ ಸೊಮಾಲಿಯಾದಲ್ಲಿ ನೀರವ ಮೌನ ಕಾಣಿಸಿಕೊಂಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ