ಕೆಂಪು ಕೋಟೆ ಬಳಿ ಸ್ಫೋಟ: ಫರಿದಾಬಾದ್ ಸ್ಫೋಟ ಮಾದರಿಯಲ್ಲಿ ಸ್ಫೋಟ ಶಂಕೆ
ನವದೆಹಲಿ: ಕೆಂಪು ಕೋಟೆ ಬಳಿ ನಡೆದ ಸ್ಫೋಟದ ಬಗ್ಗೆ ದೆಹಲಿ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫರಿದಾಬಾದ್ ನಲ್ಲಿ ಪತ್ತೆಯಾದ ಭಯೋತ್ಪಾದಕ ಮಾದರಿಗೂ ದೆಹಲಿ ಸ್ಫೋಟಕ್ಕೂ ಸಂಬಂಧವಿದೆ ಎಂಬ ಪ್ರಾಥಮಿಕ ತನಿಖಾ ವರದಿಯ ಜಾಡು ಹಿಡಿದು ದೆಹಲಿಯ ಹಲವೆಡೆ ದಾಳಿ ನಡೆಸಿದ್ದಾರೆ.
ಸ್ಫೋಟದ ತೀವ್ರತೆಗೆ 12 ಜನ ಮೃತಪಟ್ಟು, 20 ಜನ ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಗುಪ್ತಚರ ವಿಭಾಗದ ನಿರ್ದೇಶಕ ತಪನ್ ದೇಕಾ, ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಟಾ ಮತ್ತು ಎನ್ ಐಎ ಡಿ.ಜಿ.ಸದಾನಂದ ವಸಂತ್ ಡೇಟ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ನಳಿನ್ ಪ್ರಭಾತ್ ಅವರು ವರ್ಚುವಲ್ ಮೂಲಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ವಿಮಾನ ನಿಲ್ದಾಣ, ರೈಲು ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಕಟ್ಟುನಿಟ್ಟಿನ ಕಣ್ಣಾವಲು ಇರಿಸಲಾಗಿದೆ.
ಬಾಂಬ್ ಸ್ಫೋಟಕ್ಕೂ ಮೊದಲು ಸ್ಫೋಟಗೊಂಡ ಹ್ಯುಂಡೇ ಐ20 ಕಾರನ್ನು ಕಾಶ್ಮೀರದ ಪುಲ್ವಾಮಾ ನಿವಾಸಿಯಾಗಿರುವ ವೈದ್ಯ ಉಮರ್ ಮೊಹಮ್ಮದ್ ಚಾಲನೆ ಮಾಡುತ್ತಿದ್ದ ಎಂದೆನ್ನಲಾಗಿದೆ. ಕೆಂಪುಕೋಟೆ ಸುತ್ತ ಸುಮಾರು ನೂರಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಸ್ಫೋಟ ಸಂಭವಿಸುವ ಮೂರು ಗಂಟೆಗಳ ಮೊದಲಿನಿಂದಲೂ ಕಾರು ಮತ್ತು ಅದನ್ನು ಚಾಲನೆ ಮಾಡುತ್ತಿದ್ದ ವ್ಯಕ್ತಿಯ ಚಲನವಲನಗಳನ್ನು ವೀಕ್ಷಿಸಿದ್ದಾರೆ. ಅದರಲ್ಲಿ ಈ ವ್ಯಕ್ತಿಯ ಚಿತ್ರ ಕಂಡುಬಂದಿದೆ ಎಂದು
ಮೂಲಗಳು ತಿಳಿಸಿವೆ. ಜತೆಗೆ ಫರಿದಾಬಾದ್ ನಲ್ಲಿನ ಭಯೋತ್ಪಾದಕ ಸಂಘಟನೆಯೊಂದಿಗೆ ಆತನಿಗೆ ಸಂಪರ್ಕವಿದೆ ಎಂದು ವರದಿಯಾಗಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























