ಸುಲಿಗೆ ಪ್ರಕರಣ: ಬಂಧಿತ ಆರೋಪಿಯಿಂದ 5 ಲಕ್ಷ ರೂ, 18 ದ್ವಿಚಕ್ರ ವಾಹನ, 8 ಮೊಬೈಲ್ ವಶ
ಬೆಂಗಳೂರು ನಗರ: ಪೂರ್ವ ವಿಭಾಗದಬಾಣಸವಾಡಿ ಉಪವಿಭಾಗ ಪೊಲೀಸರು ಸುಲಿಗೆಯಲ್ಲಿ ಭಾಗಿಯಾಗಿದ್ದ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 5.50 ಲಕ್ಷ ರೂ. ಮೌಲ್ಯದ 18 ದ್ವಿಚಕ್ರ ವಾಹನ, 8 ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ.
ಕಳೆದ ಜುಲೈ 9ರಂದು ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದಿನ ಕಲ್ಯಾಣನಗರದ ಸರ್ವಿಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೋರ್ವ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಹೆಂಡತಿಯ, ಚಿನ್ನದ ಸರವನ್ನು ಸುಲಿಗೆ ಮಾಡಲು ಪ್ರಯತ್ನ ಮಾಡಿರುತ್ತಾನೆಂದು ದೂರು ದಾಖಲಾಗಿರುತ್ತದೆ.
ನೀಡಿದ ದೂರಿನ ಅನ್ವಯ, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಿಸಿಕೊಂಡು ಕಾರ್ಯಪ್ರವೃತ್ತರಾದ ಪೊಲೀಸರು, ಜುಲೈ 19 ರಂದು ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ ಆತನಿಂದ ಸುಮಾರು 5,50,000/-ರೂ ಬೆಲೆಬಾಳುವ 8 ವಿವಿಧ ಕಂಪನಿಯ ದ್ವಿಚಕ್ರ ವಾಹನಗಳು ಹಾಗೂ 8 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ಅಲ್ಲದೇ ಆರೋಪಿಯು ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಹೆಬ್ಬಾಳ ಪೊಲೀಸ್ ಠಾಣೆ, ತುರುವೇಕೆರೆ ಟೌನ್ ಠಾಣೆಯಲ್ಲಿ ತಲಾ-01 ಪ್ರಕರಣ ಹಾಗೂ ಬಾಣಸವಾಡಿ ಪೊಲೀಸ್ ಠಾಣೆಯ-02 ಪ್ರಕರಣ ಪತ್ತೆಯಾಗಿರುತ್ತದೆ.ಅಲ್ಲದೇ ಇತರ ಸ್ಥಳಗಳಲ್ಲಿ 04 ವಾಹನಗಳನ್ನು ಕಳವು ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದು,ಈ ಸಂಬಂಧ ಪೊಲೀಸರಿಂದ ತನಿಖೆ ಮುಂದುವರೆದಿದೆ.
ಬೆಂಗಳೂರು ನಗರ, ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಾ.ಭೀಮಾಶಂಕರ ಗುಳೇದ, ಐಪಿಎಸ್ ಮತ್ತು ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಉಮಾಶಂಕರ್.ಎ.ಹೆಚ್. ಮಾರ್ಗದರ್ಶನದಲ್ಲಿ ಬಾಣಸವಾಡಿ ರವರ ನೇತೃತ್ವದ ಯಶಸ್ವಿಯಾಗಿರುತ್ತಾರೆ. ಪೊಲೀಸ್ ಸಿಬ್ಬಂದಿಯವರ ಪೊಲೀಸ್ ಇನ್ಸ್‌ಪೆಕ್ಟರ್ . ಸಂತೋಷ್ ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























