ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆ ತಡೆಯಲು ವಿಫಲ: ಸ್ವಯಂ ಪ್ರೇರಿತ ದೂರು ದಾಖಲಿಸಿದ ಲೋಕಾಯುಕ್ತ - Mahanayaka

ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆ ತಡೆಯಲು ವಿಫಲ: ಸ್ವಯಂ ಪ್ರೇರಿತ ದೂರು ದಾಖಲಿಸಿದ ಲೋಕಾಯುಕ್ತ

udupi1
10/06/2023

ಮಂಗಳೂರು ನಗರದ ಹೊರವಲಯದ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲವಾದ ಮಂಗಳೂರು ಮಹಾನಗರಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಜೂನ್ 4ರಂದು ಪ್ರಕಟಗೊಂಡ ವಿವಿಧ ಮಾಧ್ಯಮ ವರದಿಗಳ ಆಧಾರದಲ್ಲಿ ಲೋಕಾಯುಕ್ತ ಕಾಯಿದೆಯ ಸೆಕ್ಷನ್ 7(2) ಮತ್ತು 9(3-ಎ) ಅಡಿಯಲ್ಲಿ ಪ್ರಕರಣ ಕೈಗೆತ್ತಿಕೊಂಡಿರುವ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಮುಂದಿನ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಪಾಲಿಕೆ ಉಪಾಯುಕ್ತ (ಆಡಳಿತ), ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಹಾಗೂ ಕೆಐಎಡಿಬಿ ಕಾರ್ಯಕಾರಿ ಅಭಿಯಂತರರಿಗೆ ಸೂಚನೆ ನೀಡಿದೆ.
ಅಲ್ಲದೇ ಆದೇಶ ದೊರೆತ 15 ದಿನಗಳ ಒಳಗಡೆ ವಿವರವಾದ ವರದಿ ಸಲ್ಲಿಸುವಂತೆಯೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಉಪ ಲೋಕಾಯುಕ್ತರು ಸೂಚಿಸಿದ್ದಾರೆ.

ಒಳಚರಂಡಿಗಳ ಮೂಲಕ ನದಿಗೆ ತ್ಯಾಜ್ಯ ಬಿಡುಗಡೆಯಾಗುತ್ತಿರುವುದು ಜಲಚರಗಳಿಗೆ ಮಾತ್ರವಲ್ಲ ಆ ನೀರನ್ನು ಬಳಸುವ ಮನುಷ್ಯರಿಗೂ ಪ್ರಾಣಿಗಳಿಗೂ ಹಾನಿಕರವಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಉಪಲೋಕಾಯುಕ್ತರು ತಿಳಿಸಿದ್ದಾರೆ. ಪಣಂಬೂರು ಮತ್ತು ಬೈಕಂಪಾಡಿ ಪರಿಸರದಲ್ಲಿ ಕಾರ್ಯಾಚರಿಸುವ ಹಲವು ಕೈಗಾರಿಕೆಗಳು ತ್ಯಾಜ್ಯ ಸಂಸ್ಕರಣೆ ನಡೆಸದೆ ಅವುಗಳನ್ನು ನೇರವಾಗಿ ನದಿಗೆ ಬಿಡುಗಡೆಗೊಳಿಸುತ್ತಿವೆ. ಇದರಿಂದ ಸ್ಥಳೀಯ ಹಲವು ಬಾವಿ ನೀರು ಕಲುಷಿತಗೊಂಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ