ಗೃಹಜ್ಯೋತಿ- ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್: ಪೊಲೀಸ್ ಇಲಾಖೆಯಿಂದ ಎಚ್ಚರಿಕೆ

griha lakshmi yojana
16/07/2023

ಉಡುಪಿ: ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿರುವ ನಕಲಿ ಅಪ್ಲಿಕೇಷನ್‌ಗಳ ಕುರಿತು ಸಾರ್ವಜನಿಕರು ಎಚ್ಚರ ವಹಿಸುವಂತೆ ಉಡುಪಿ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಈ ರೀತಿಯ ನಕಲಿ ಅಪ್ಲಿಕೇಷನ್‌ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ನ್ನು ಬಳಸಬಾರದು. ಈ ರೀತಿಯಾದ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು.

ಯಾವುದೇ ಹೆಲ್ಪ್‌ಡೆಸ್ಕ್ ನಿಂದ ಕರೆ ಮಾಡಿ ನೀವು ಈ ಯೋಜನೆಗೆ ಆಯ್ಕೆಯಾಗಿದ್ದಿರಿ, ನಿಮ್ಮ ವೈಯುಕ್ತಿಕ ವಿವರಗಳನ್ನು ನೀಡುವಂತೆ ತಿಳಿಸಿದ್ದಲ್ಲಿ ಕೂಡ ಯಾವುದೇ ಮಾಹಿತಿ ನೀಡಬಾರದು. ಸಾರ್ವಜನಿಕರು ಇಂತಹ ನಕಲಿ ಅಪ್ಲಿಕೇಷನ್‌ಗಳ ಮೂಲಕ ತಮ್ಮ ವೈಯಕ್ತಿಕ ಆಧಾರ್, ಪ್ಯಾನ್ ಕಾರ್ಡ್ ಮಾಹಿತಿ ನೀಡಿ ಮೋಸ ಹೋಗಬಾರದು.

ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸರಕಾರವು ಇದುವರೆಗೂ ಯಾವುದೇ ಅಂಡ್ರಾಯ್ಡಾ ಅಪ್ಲಿಕೇಷನ್ ಅನ್ನು ಬಿಡುಗಡೆ ಮಾಡಿರುವುದಿಲ್ಲ. ಈ ಯೋಜನೆ ಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡ ಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version