ಬೆಂಗಳೂರಿನ ಐಐಎಸ್ಸಿ ಕೇಂದ್ರೀಯ ವಿದ್ಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಇ ಮೇಲ್ - Mahanayaka

ಬೆಂಗಳೂರಿನ ಐಐಎಸ್ಸಿ ಕೇಂದ್ರೀಯ ವಿದ್ಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಇ ಮೇಲ್

iisc kendriya vidyalaya
04/02/2024


Provided by

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಶಾಲೆಗೆ ಇ ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಬಂದಿದೆ.

ಬೆಂಗಳೂರಿನ ಯಶವಂತಪುರದಲ್ಲಿರುವ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಜನವರಿ 28ರಂದು ಬಾಂಬ್ ಬೆದರಿಕೆ ಬಂದಿದ್ದು ತಡವಾಗಿ ಬೆಳಕಿಗೆ ಬಂದಿದೆ.

Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ  ಬೆದರಿಕೆ ಕರೆ ಬಂದಿದ್ದು,  ಪೊಲೀಸರು ಹಾಗೂ  ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶಾಲೆಯೊಳಗೆ ಬಾಂಬ್ ಇಟ್ಟಿದ್ದೇವೆ ಬೆಳಗ್ಗೆ 10:20ಕ್ಕೆ ಬ್ಲಾಸ್ಟ್ ಆಗುತ್ತೆ ಎಂದು ಇ ಮೇಲ್ ನಲ್ಲಿ ಬೆದರಿಕೆ ಹಾಕಲಾಗಿತ್ತು.  ಮೇಲ್ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಅಲರ್ಟ್ ಆಗಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಶಾಲೆಗೆ ಬಂದ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದಾಗ ಹುಸಿ ಬಾಂಬ್ ಕರೆ ಎನ್ನುವುದು ಸ್ಪಷ್ಟವಾಗಿದೆ.

ಇತ್ತೀಚಿನ ಸುದ್ದಿ