7:13 PM Saturday 25 - October 2025

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಭಡ್ತಿ ಪಡೆಯಲು ಸುಳ್ಳು ಜಾತಿ ಪತ್ರ: ಮಾಜಿ ಶಾಸಕನ ಪತ್ನಿಯ ವಿರುದ್ಧ ದೂರು

dr suja
26/10/2023

ಬೆಂಗಳೂರು: ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಭಡ್ತಿ ಪಡೆಯಲು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ಆರೋಪ ಮಾಜಿ ಶಾಸಕರೊಬ್ಬರ ಪತ್ನಿಯ ವಿರುದ್ಧ ಕೇಳಿ ಬಂದಿದೆ.

ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅವರ ಪತ್ನಿ ಡಾ. ಸುಜಾ ಕೆ. ಶ್ರೀಧರ್ ವಿರುದ್ಧ ಇಂತಹದ್ದೊಂದು ಗಂಭೀರ ಆರೋಪ ಕೇಳಿ ಬಂದಿದೆ.

ಪರಿಶಿಷ್ಟ ಜಾತಿಯ ದ್ರಾವಿಡ ಜಾತಿಯ ಸುಳ್ಳು ಪ್ರಮಾಣ ಪತ್ರ ಪಡೆದಿರುವ ಡಾ. ಸುಜಾ ಕೆ. ಶ್ರೀಧರ್, ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಭಡ್ತಿ ಪಡೆದುಕೊಂಡಿದ್ದರು. ಇದೇ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಜಿ.ಎನ್.ಶಕುಂತಲಾ ಅವರಿಗೆ ದೊರೆತಿದ್ದ ಭಡ್ತಿಯನ್ನು ಮಾಜಿ ಶಾಸಕರು ತಮ್ಮ ಪ್ರಭಾವ ಬಳಸಿ ತನ್ನ ಪತ್ನಿಗೆ  ಕೊಡಿಸಿದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಉಪನ್ಯಾಸಕಿ ಡಾ.ಶಕುಂತಲಾ ಸುಳ್ಳ ಜಾತಿ ಪತ್ರ ನೀಡಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಅಧೀಕ್ಷಕ ಎಚ್.ಡಿ.ಆನಂದ್ ಕುಮಾರ್ ಅವರಿಗೆ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version