ಖ್ಯಾತ ನಟಿ, ನಿರೂಪಕಿ ಸುಬಿ ಸುರೇಶ್ ನಿಧನ: 41ನೇ ವಯಸ್ಸಿನಲ್ಲೇ ಬದುಕಿನ ಪಯಣ ಮುಗಿಸಿದ ನಟಿ
ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
41 ವರ್ಷ ವಯಸ್ಸಿನ ಸುಬಿ ಸುರೇಶ್ ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.
ಸುಬಿ ಸುರೇಶ್ ನಿಧನಕ್ಕೆ ಮಲಯಾಳಂ ಚಿತ್ರರಂಗ ಕಣ್ಣೀರು ಹಾಕಿದೆ. ಸುಬಿ ಅವರು ಪೋಷಕರು ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























