ತಮಿಳಿನ ಖ್ಯಾತ ಹಾಸ್ಯ ನಟ ಮನೋಬಾಲ ಇನ್ನಿಲ್ಲ - Mahanayaka

ತಮಿಳಿನ ಖ್ಯಾತ ಹಾಸ್ಯ ನಟ ಮನೋಬಾಲ ಇನ್ನಿಲ್ಲ

manuballa
03/05/2023

ತಮಿಳಿನ ಖ್ಯಾತ ಹಿರಿಯ ಹಾಸ್ಯ ನಟ, ನಿರ್ದೇಶಕ ಮನೋಬಾಲ ಅವರಿಂದು ನಿಧನರಾಗಿದ್ದು, ಅವರ ನಿಧನಕ್ಕೆ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ.


Provided by

69 ವರ್ಷದ ಮನೋಬಾಲ ಅವರು, ಲಿವರ್ ಸಂಬಂಧಿತ ಸಮಸ್ಯೆಯಿಂದ ಸಮಸ್ಯೆಯಿಂದ ಬಳಲುತ್ತಿದ್ದರು. ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಕಲಾ ಕ್ಷೇತ್ರದಲ್ಲಿ ಬಣ್ಣ ಹಚ್ಚಿದ್ದರು.

ಸುಮಾರು 450ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮನೋಬಾಲ ನಟಿಸಿದ್ದರು. ಪರದೆಯಲ್ಲಿ ಮನೋಬಾಲ ಬರುತ್ತಿದ್ದಂತೆಯೇ ಪ್ರೇಕ್ಷಕರನ್ನು ಬಿದ್ದು ಬಿದ್ದು ನಗಿಸುವ ಸಾಮರ್ಥ್ಯವನ್ನು ಹೊಂದಿದ್ದ ಪ್ರತಿಭಾನ್ವಿತ ನಟರಾಗಿದ್ದರು.
ಇಂದು ಕಾಲಿವುಡ್ ಬೃಹತ್ ಪ್ರತಿಭೆಯೊಂದನ್ನು ಕಳೆದುಕೊಂಡು ಬರಿದಾಗಿದೆ ಎಂದು ಮನೋಬಾಲ ಅವರ ಅಭಿಮಾನಿಗಳು, ಸಿನಿಮಾ ಕ್ಷೇತ್ರದ ಗಣ್ಯರು ಕಣ್ಣೀರು ಹಾಕಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ