ಆಟೋಗಾಗಿ ಕಾಯುತ್ತಿದ್ದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ
ಫರಿದಾಬಾದ್: ಹರಿಯಾಣದ ಫರಿದಾಬಾದ್ ನಲ್ಲಿ ಮಾನವೀಯತೆ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಕೆಲಸ ಮುಗಿಸಿ ಮನೆಗೆ ಮರಳಲು ಆಟೋಗಾಗಿ ಕಾಯುತ್ತಿದ್ದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ನೊಂದ ಯುವತಿಯ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿ ಘಟನೆಯ ಭೀಕರತೆಯನ್ನು ವಿವರಿಸಿದ್ದಾರೆ. “ನನ್ನ ತಂಗಿ ರಾತ್ರಿ ಸುಮಾರು 8:30ಕ್ಕೆ ಕೆಲಸ ಮುಗಿಸಿ ಕಚೇರಿಯಿಂದ ಹೊರಬಂದಿದ್ದಳು. ಮನೆಗೆ ಬರಲು ಆಕೆ ರಸ್ತೆಯಲ್ಲಿ ಆಟೋಗಾಗಿ ಕಾಯುತ್ತಿದ್ದಳು. ಇದೇ ವೇಳೆ ಅಲ್ಲಿಗೆ ಬಂದ ದುಷ್ಕರ್ಮಿಗಳು ಆಕೆಯನ್ನು ಬಲವಂತವಾಗಿ ಎಳೆದೊಯ್ದಿದ್ದಾರೆ,” ಎಂದು ಅವರು ತಿಳಿಸಿದ್ದಾರೆ.
ಯುವತಿ ಮನೆಗೆ ಬಾರದಿರುವುದನ್ನು ಕಂಡು ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಸದ್ಯ ತನಿಖೆ ಆರಂಭಿಸಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಅತ್ಯಾಚಾರಕ್ಕೊಳಗಾದ ಯುವತಿಯ ಸ್ಥಿತಿ ಗಂಭೀರವಾಗಿದ್ದು, ಆಕೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಕುಟುಂಬಸ್ಥರು ಮತ್ತು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























