ತೊಗರಿ ಬೆಳೆ ಮಧ್ಯೆ ಗಾಂಜಾ ಬೆಳೆದ ರೈತ: 2 ಕೋಟಿ ಮೌಲ್ಯದ ಗಾಂಜಾ ವಶಕ್ಕೆ
ಬೀದರ್: ತೊಗರಿ ಬೆಳೆಯ ಮಧ್ಯೆ ಗಾಂಜಾ ಬೆಳೆದಿರುವ ಪ್ರಕರಣವೊಂದು ಮಹಾರಾಷ್ಟ್ರ–ಕರ್ನಾಟಕ ಗಡಿಭಾಗದ ಬಸವಕಲ್ಯಾಣ ತಾಲೂಕಿನ ಉಜಳಾಂಬ ಗ್ರಾಮದಲ್ಲಿ ನಡೆದಿದೆ.
ಮಹಾರಾಷ್ಟ್ರದ ರೈತ ಬಸವಂತ ಎಂಬವರು ಕರ್ನಾಟಕಕ್ಕೆ ಸೇರಿದ ಸರ್ವೇ ನಂಬರ್ ನ ಜಮೀನಿನಲ್ಲಿ ಗಾಂಜಾ ಬೆಳೆದಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೀದರ್ ಪೊಲೀಸ್ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ದಾಳಿ ವೇಳೆ ಸುಮಾರು 2 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹೇಳಿದ್ದಾರೆ.
ಜಮೀನಿನಲ್ಲಿ ತೊಗರಿ ಬೆಳೆಯ ಮಧ್ಯೆ ಗಾಂಜಾ ಗಿಡಗಳನ್ನು ನೆಡಲಾಗಿತ್ತು. ಅಂದಾಜು 6 ಅಡಿಯಷ್ಟು ಎತ್ತರ ಗಿಡಗಳು ಬೆಳೆದಿದ್ದವು. ನಮ್ಮ ಸಿಬ್ಬಂದಿ ಪಂಚನಾಮ ನಡೆಸಿ, ಸುಮಾರು 700ಕ್ಕಿಂತ ಹೆಚ್ಚು ಗಿಡಗಳನ್ನು ಕಿತ್ತು ಹಾಕಿದ್ದಾರೆ. ಸುಮಾರು 2 ಕೋಟಿಗೂ ಅಧಿಕ ಮೌಲ್ಯದ 400 ಕೆ.ಜಿ ಗಾಂಜಾ ಇರಬಹುದೆಂದು ಅಂದಾಜಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: