ಜಮೀನಿಗೆ ಬಿದ್ದ ಬೆಂಕಿ ಆರಿಸಲು ಹೋಗಿದ್ದ ರೈತ ಮಹಿಳೆ ಸಜೀವ ದಹನ!

25/03/2024
ಹಾಸನ: ಜಮೀನಿಗೆ ಬಿದ್ದ ಬೆಂಕಿಯನ್ನು ಆರಿಸಲು ಯತ್ನಿಸಿದ ರೈತ ಮಹಿಳೆಯೊಬ್ಬರು ಬೆಂಕಿಗಾಹುತಿಯಾದ ಘಟನೆ ಆಲೂರು ತಾಲೂಕಿನ ಹಾಚಗೋಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರತ್ನಮ್ಮ(63) ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ. ನಿನ್ನೆ ರಾತ್ರಿ ಜಮೀನಿಗೆ ಬೆಂಕಿ ಬಿದ್ದ ವಿಷಯ ತಿಳಿದು ಸ್ಥಳಕ್ಕೆ ಹೋದ ರತ್ನಮ್ಮ ಬೆಂಕಿ ನಂದಿಸಲು ಮುಂದಾಗಿದ್ದರು.
ಬೆಂಕಿ ಜೋರಾಗಿ ಉರಿಯುತ್ತಿದ್ದು, ಈ ವೇಳೆ ಆಕಸ್ಮಿಕವಾಗಿ ಬೆಂಕಿಯಲ್ಲಿ ಸಿಲುಕಿದ್ದು, ಬೆಂಕಿಯಿಂದ ಹೊರಬರಲಾಗದೇ ರತ್ನಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth