ಬಿಗ್ ಬ್ರೇಕಿಂಗ್ ನ್ಯೂಸ್: ಡಿಸೆಂಬರ್ 8ರಂದು ಭಾರತ್ ಬಂದ್!? - Mahanayaka
10:41 AM Saturday 23 - August 2025

ಬಿಗ್ ಬ್ರೇಕಿಂಗ್ ನ್ಯೂಸ್: ಡಿಸೆಂಬರ್ 8ರಂದು ಭಾರತ್ ಬಂದ್!?

04/12/2020


Provided by

ನವದೆಹಲಿ:  ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನನ್ನು ವಿರೋಧಿಸಿ ದೆಹಲಿಯ ಹೊರವಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಂಗಳವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಇನ್ನು ಸರ್ಕಾರದ ಜೊತೆಗೆ ಮಾತುಕತೆ ನಡೆಸುವುದಿಲ್ಲ ಎಂದು ಸಂದೇಶ ರವಾನಿಸಿದ್ದಾರೆ.

ದೇಶಾದ್ಯಂತ ಎಲ್ಲ ಹೆದ್ದಾರಿಗಳನ್ನು ರೈತರು ಆಕ್ರಮಿಸಿಕೊಳ್ಳುವ ಸಾಧ್ಯತೆಗಳು ಕಂಡು ಬಂದಿದ್ದು, ಡಿಸೆಂಬರ್ 8ರಂದು ರಾಜಧಾನಿ ದೆಹಲಿಗೆ ಹೋಗುವ ಎಲ್ಲ ರಸ್ತೆಗಳನ್ನು ರೈತರು ಮುಚ್ಚಲು ನಿರ್ಧರಿಸಿದ್ದು, ಕೇಂದ್ರ ಸರ್ಕಾರದ ಜೊತೆಗಿನ ಮಾತುಕತೆ ಫಲಪ್ರದವಾಗದ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ದೇಶಾದ್ಯಂತ ಎಲ್ಲ ಹೆದ್ದಾರಿ ಟೋಲ್ ಗೇಟ್ ಗಳನ್ನು ಬಂದ್ ಮಾಡಲು ರೈತರು ಮುಂದಾಗಿದ್ದು,  ಟೋಲ್ ಸಂಗ್ರಹಿಸಲು ಕೂಡ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.  ಕೇಂದ್ರ ಸರ್ಕಾರದ ಜೊತೆಗೆ ನಾಲ್ಕನೆ ಸುತ್ತಿನ ಮಾತುಕತೆ ನಡೆಸಿದ ಬಳಿಕವೂ ಸರ್ಕಾರ ರೈತರ ಮಾತಿಗೆ ಕನಿಷ್ಠ ಬೆಲೆ ನೀಡದ ಹಿನ್ನೆಲೆಯಲ್ಲಿ ರೈತರು ಕೆರಳಿದ್ದು, ಇದರಿಂದ ರೈತರು ಆಕ್ರೋಶ  ಉಲ್ಬಣಗೊಂಡಿದ್ದು, ಕೇಂದ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ರೈತರು ಮುಂದಾಗಿದ್ದಾರೆ.

ಇತ್ತೀಚಿನ ಸುದ್ದಿ