ರೈತರ ಆದಾಯ ದುಪ್ಪಟ್ಟು ಆಗುತ್ತಿಲ್ಲ, ಆತ್ಮಹತ್ಯೆ ದುಪ್ಪಟ್ಟಾಗುತ್ತಿದೆ: ಪ್ರಿಯಾಂಕ್ ಖರ್ಗೆ
ನೆಟೆರೋಗದ ಹಾವಳಿಯಿಂದಾಗಿ ತೊಗರಿ ಬೆಳೆ ಸಂಪೂರ್ಣ ಹಾಳಾಗಿರುವ ಹಿನ್ನಲೆಯಲ್ಲಿ ಸರ್ಕಾರ ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಯವರಿಗೆ ಬೃಹತ್ ಪ್ರತಿಭಟನೆ ಜಾಥಾ ನಡೆಯಿತು.
ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಗಾರರು ನೆಟೆರೋಗದಿಂದ ಸಂಪೂರ್ಣ ಹಾನಿ ಅನುಭವಿಸಿದ್ದಾರೆ. ಈ ಸರ್ಕಾರದಲ್ಲಿ ನಮ್ಮ ರೈತರ ಗೋಳು ಕೇಳುವವರು ಇಲ್ಲ. ಇದೇ ಸಮಸ್ಯೆ ಬೆಂಗಳೂರು ಕಡೆಯ ಯಾವುದೇ ಜಿಲ್ಲೆಯಲ್ಲಿ ಆಗಿದ್ದರೆ ಇಷ್ಟೊತ್ತಿಗೆ ಸರ್ಕಾರದ ಸಚಿವರು ಓಡೋಡಿ ಹೋಗಿ ಪರಿಹಾರ ಒದಗಿಸುತ್ತಿದ್ದರು. ಆದರೆ ಕಲಬುರಗಿ ಜಿಲ್ಲೆಯ ಬಿಜೆಪಿ ಶಾಸಕರು ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ನೆಟೆರೋಗದಿಂದ ಅನುಭವಿಸಿದ ಹಾನಿಗೆ ಪರಿಹಾರ ದೊರಕಿಸಿಕೊಡಲು ಅವರ ಬಾಯಿ ತೆಗೆಯುತ್ತಿಲ್ಲ.ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರಿಗೆ ಮಾತೇ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರ ಸಂಕಷ್ಟಗಳಿಗೆ ಸ್ಪಂದಿಸದೆ ಇರುವುದರಿಂದ ರೈತರ ಆದಾಯ ದುಪ್ಪಟ್ಟು ಆಗದೆ ರೈತರ ಆತ್ಮಹತ್ಯೆ ದುಪ್ಪಟ್ಟು ಆಗುತ್ತಿವೆ. ಡಾ ಸ್ವಾಮಿನಾಥನ್ ವರದಿ ಜಾರಿಗೆ ತಂದು ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಭರವಸೆ ನೀಡಿದ ಕೇಂದ್ರ ಸರ್ಕಾರ ತನ್ನ ಮಾತು ಮರೆತಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ ರೈತರಿಗೆ ಅನ್ಯಾಯವಾದರೆ ಬೀದಿಗಿಳಿದು ಹೋರಾಟ ನಡೆಸಲಿದೆ, ಈ ಭಾಗದ ರೈತರ ಬಡವರ ಯುವಕರ ಭವಿಷ್ಯದ ಪರ ಕುಂದು ಉಂಟಾದರೆ ಉಗ್ರ ಹೋರಾಟ ನಡೆಸಲಿದೆ, ಇಂದು ಕಲಬುರಗಿಯಲ್ಲಿ ಹತ್ತಿದ ಕಿಚ್ಚು ಬೆಳಗಾವಿ ಅಧಿವೇಶನದಲ್ಲಿ ಹಾಗೂ ಬೆಂಗಳೂರಿನಲ್ಲಿ ಹತ್ತಬೇಕು. ರೈತರ ಪರ ಧ್ವನಿ ಅಧಿವೇಶನದಲ್ಲಿ ಮೊಳಗಲಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷರ ಕಾರ್ಯಕರ್ತರು ಜನಪ್ರತಿನಿದಿಗಳು ಹಾಗೂ ರೈತ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka