5:16 AM Thursday 13 - November 2025

ಫಾಝಿಲ್ ಮನೆಗೆ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಭೇಟಿ

fasill
01/08/2022

ಮಂಗಳೂರು: ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ಫಾಝಿಲ್ ಮನೆಗೆ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊಲೆಗಡುಕರಿಗೆ ತಕ್ಕ ಶಿಕ್ಷೆ ಆಗಬೇಕು. ಇದಕ್ಕೆ ಬೇಕಾದ ಕಾನೂನು ಹೋರಾಟದಲ್ಲಿ ಪಕ್ಷ ಫಾಝಿಲ್ ಕುಟುಂಬದ ಜೊತೆ ನಿಲ್ಲಲಿದೆ ಎಂದರು.

ಸಾಂತ್ವಾನ ಹೇಳುವುದರಲ್ಲಿಯೂ ಸರ್ಕಾರ ಅನುಸರಿಸಿದ ತಾರತಮ್ಯ ನೀತಿಯನ್ನು ಖಂಡಿಸಿದ ಮಜೀದ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಯಾದ ಮೂವರಿಗೂ ಸರ್ಕಾರದಿಂದ ಸಮಾನ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು. ಇದೇ ವೇಳೆ ಫಾಝಿಲ್ ಅವರ ಸಮಾಧಿ ಇರುವ ಸ್ಥಳಕ್ಕೆ ಭೇಟಿ ನೀಡಿದ ಅವರು ಮೃತರಿಗಾಗಿ ಪ್ರಾರ್ಥನೆ ಮಾಡಿದರು.

ಈ ಸಂದರ್ಭದಲ್ಲಿ ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ, ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ,ಮೂಡಬಿದ್ರೆ ಕ್ಷೇತ್ರಾಧ್ಯಕ್ಷರಾದ ಆಸೀಫ್ ಕೋಟೆಬಾಗಿಲು, ಅಯ್ಯೂಬ್ ಸೂರಿಂಜೆ ಹಾಗೂ ಸ್ಥಳೀಯ ನಾಯಕರು ಕಾರ್ಯಕರ್ತರು ಜೊತೆಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ

Exit mobile version