ಇಂದು ಮಧ್ಯ ರಾತ್ರಿಯಿಂದಲೇ ಫಾಸ್ಟ್ಯಾಗ್ ಬಳಕೆ ಕಡ್ಡಾಯ! - Mahanayaka

ಇಂದು ಮಧ್ಯ ರಾತ್ರಿಯಿಂದಲೇ ಫಾಸ್ಟ್ಯಾಗ್ ಬಳಕೆ ಕಡ್ಡಾಯ!

14/02/2021


Provided by

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಾರ್ಯಾಚರಿಸುತ್ತಿರುವ ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಪಾವತಿಸಲು ಫಾಸ್ಟ್ಯಾಗ್ ಬಳಸುವುದು ಕಡ್ಡಾಯವು ಸೋಮವಾರ ಮಧ್ಯ ರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಕೇಂದ್ರ ಭೂಸಾರಿಗೆ ಸಚಿವಾಲಯ ತಿಳಿಸಿದೆ.

ಶುಲ್ಕ ಸಂಗ್ರಹದ ವ್ಯಾಪ್ತಿಗೆ ಬರುವ ಎಲ್ಲ ಹೆದ್ದಾರಿ, ರಸ್ತೆಗಳನ್ನು ಫಾಸ್ಟ್ಯಾಗ್ ಮಾರ್ಗ ಎಂದು ಪರಿಗಣಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ. ಜನವರಿ 1ರಿಂದಲೇ ಫಾಸ್ಟ್ಯಾಗ್ ಬಳಸುವುದನ್ನು ಕಡ್ಡಾಯ ಮಾಡಲಾಗಿತ್ತು. ಬಳಿಕ ಅದನ್ನು ಫೆಬ್ರವರಿ 15ಕ್ಕೆ ಮುಂದೂಡಲಾಗಿತ್ತು. ಫಾಸ್ಟ್ಯಾಗ್ ಬಳಕೆ ಕಡ್ಡಾಯವಾಗುವಂತೆ ಎಲ್ಲ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದೂ ಸಚಿವಾಲಯ ಸೂಚಿಸಿತ್ತು.

ಒಂದೆಡೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಇನ್ನೊಂದೆಡೆ ಟೋಲ್ ಫ್ಲಾಜಾಗಳ ಕಾಟದಿಂದ ಸಾರ್ವಜನಿಕರು ತತ್ತರಿಸಿದ್ದಾರೆ. ಫಾಸ್ಟ್ಯಾಗ್ ಬಳಕೆ ಮಾಡದೇ ಇದ್ದರೆ ಅಂತಹವರು ದುಪ್ಪಟ್ಟು ಹಣ ನೀಡಿ ಸಂಚರಿಸಬೇಕಾಗುತ್ತದೆ. ಇದರಿಂದ ಸಾರ್ವಜನಿಕರು ನೆಮ್ಮದಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಇತ್ತೀಚಿನ ಸುದ್ದಿ