ಕಾರು—ಲಾರಿ ನಡುವೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

12/05/2025
ಚಿತ್ರದುರ್ಗ: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಂಧ್ರ ಪ್ರದೇಶ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೊಳಲ್ಕೆರೆ ತಾಲೂಕು ಹಳೆಹಳ್ಳಿ ಬಳಿ ಇಂದು ಮುಂಜಾನೆ ನಡೆದಿದೆ.
ಸುನೀತಾ(34) ಶ್ಯಾಂ ಬಾಬು(19) ಹಾಗೂ ಶಿವ ನಾಗಲು(60) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರೆಲ್ಲರೂ ಆಂಧ್ರಪ್ರದೇಶದ ಗುಂಟೂರಿನ ವೆಂಕಟಪುರಂ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಆಂಧ್ರದಿಂದ ಶಿವಮೊಗ್ಗಕ್ಕೆ ಕಾರಿನಿಂದ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಹೊಳಲ್ಕೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: