ಕಾರು—ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಬಲಿ - Mahanayaka
10:15 PM Tuesday 14 - October 2025

ಕಾರು—ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಬಲಿ

ramanagara
15/06/2024

ರಾಮನಗರ: ಕಾರು ಮತ್ತು ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ಬಿಡದಿ ಹೊರವಲಯದ ಕಪನಯ್ಯನದೊಡ್ಡಿ ಬಳಿಯ ಎಕ್ಸ್ ​ಪ್ರೆಸ್ ವೇನಲ್ಲಿ ನಡೆದಿದೆ.


Provided by

ಆಂಧ್ರ ಮೂಲದ ವಿಶ್ವ (21) ಮತ್ತು ಸೂರ್ಯ (21) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ವಿದ್ಯಾರಣ್ಯಪುರದ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಮೈಸೂರಿನಿಂದ ಬೆಂಗಳೂರಿಗೆ ತೆರಳತ್ತಿದ್ದ ವೇಳೆ ತಡರಾತ್ರಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಜಖಂಗೊಂಡಿದೆ.

ಘಟನಾ ಸ್ಥಳಕ್ಕೆ  ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ರಾಮನಗರ ಸಂಚಾರಿ ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ