KSRTC ಬಸ್ – ಬೈಕ್ ನಡುವೆ ಭೀಕರ ಅಪಘಾತ: 30 ಅಡಿ ಎತ್ತರಕ್ಕೆ ಹಾರಿ ಬಿದ್ದು ಬೈಕ್ ಸವಾರ ಸಾವು

ಬೆಳಗಾವಿ: KSRTC ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಖನಗಾಂವ ಗ್ರಾಮದಲ್ಲಿ ನಡೆದಿದೆ.
ಸುಳೇಬಾವಿ ಗ್ರಾಮದ ವಿಠ್ಠಲ ದತ್ತಾ ಲೋಕರೆ(29) ಮೃತಪಟ್ಟ ಬೈಕ್ ಸವಾರನಾಗಿದ್ದು ಇಲ್ಲಿನ ಕೆ.ಎಚ್.ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬಸ್ ಬೆಳಗಾವಿ ಕಡೆಗೆ ಬರುತ್ತಿತ್ತು. ಈ ವೇಳೆ ಬೈಕ್ ಸವಾರನಿಗೆ ಗುದ್ದಿದೆ. ಪರಿಣಾಮ ಬೈಕ್ ಸವಾರ 30 ಅಡಿ ಎತ್ತರಕ್ಕೆ ಜಿಗಿದು ಹೊಲದಲ್ಲಿ ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮವಾಗಿ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth