ಬೆಳ್ತಂಗಡಿ: ಚಾರ್ಮಾಡಿ–ಉಜಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಆರು ಮಂದಿಗೆ ಗಾಯ
ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೀಟ್ ಕಾಡ್ ಬಳಿ ಚಾರ್ಮಾಡಿ–ಉಜಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅಪಘಾತದ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿವೆ.ಅಪಘಾತದಲ್ಲಿ ಗಾಯಗೊಂಡವರನ್ನು ಮಂಗಳೂರು ಕಾವೂರು ಮೂಲದ ವಿನಿತಾ (22), ಗೌರಮ್ಮ (49), ಕೋಟೇಗೌಡ (55) ಹಾಗೂ ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಭೀಮಣ್ಣ (65), ಶ್ರೀನಿವಾಸ (32) ಮತ್ತು ಶಶಿಧರ (33) ಎಂದು ಗುರುತಿಸಲಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸ್ಥಳೀಯ ಸಾರ್ವಜನಿಕರು ತಕ್ಷಣವೇ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಗಾಯಾಳುಗಳನ್ನು ವಾಹನಗಳಿಂದ ಹೊರತೆಗೆದು, ಕೂಡಲೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























