ಕಾರು—ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು

manglore 1
07/03/2023

ಮಂಗಳೂರು–ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ನಿಡಿಗಲ್ ಕೊಕ್ಕೋ ಪ್ಲಾಂಟೇಶನ್ ಸಮೀಪ ಮಂಗಳವಾರ ಬೆಳಿಗ್ಗೆ ಸ್ಕಾರ್ಪಿಯೋ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಕಲ್ಮಂಜ ಗ್ರಾಮದ ಕೇಲೆಂಗಿ ನಿವಾಸಿ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಅಶೋಕ್ ಕುಮಾರ್ (56) ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ. ಇವರು ಹಾಲು ಉತ್ಪಾದಕರ ಸಂಘಕ್ಕೆ ಮುಂಡಾಜೆ ಕಡೆ ತೆರಳುತ್ತಿದ್ದಾಗ ಮುಂಭಾಗದಿಂದ ಬಂದ ಸ್ಕಾರ್ಪಿಯೋ ಬೈಕಿಗೆ ಡಿಕ್ಕಿ ಹೊಡೆದಿದೆ.

ತೀವ್ರ ಗಾಯಗೊಂಡ ಇವರನ್ನು ಕಲ್ಮಂಜದ ಮೋಹನ್ ಕುಮಾರ್ ಮತ್ತಿತರರು ಆಸ್ಪತ್ರೆಗೆ ದಾಖಲಿಸಿದರು. ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಸಾಗಿಸಲು ತಯಾರಿ ನಡೆಸುತ್ತಿದ್ದ ವೇಳೆ ಮೃತಪಟ್ಟರು ಎನ್ನಲಾಗಿದೆ.
ಅಪಘಾತದ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತರಿಗೆ ತಂದೆ, ತಾಯಿ, ಪತ್ನಿ ಹಾಗೂ ಪುತ್ರ ಇದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version