ಆಟೋ—ಬೈಕ್ ನಡುವೆ ಭೀಕರ ರಸ್ತೆ ಅಪಘಾತ: 5 ವರ್ಷದ ಮಗು ಸಹಿತ 7 ಮಂದಿಗೆ ಗಾಯ

ಪುತ್ತೂರು: ಆಟೋ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಕಿನ ಉರ್ಲಾಂಡಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು 5 ವರ್ಷದ ಮಗು ಸಹಿತ ಸಾಲೆತ್ತೂರು ನಿವಾಸಿಗಳಾದ ಮಹಮ್ಮದ್ ತಮೀಮ್(5) ಹಮೀದ್(40), ಇಸ್ಮಾಯಿಲ್(45), ಇಬ್ರಾಹಿಂ(65), ಸುಲೈಮನ್(26) ಹಾಗೂ ಬೈಕ್ ಸವಾರ ಎಂದು ಗುರುತಿಸಲಾಗಿದೆ.
ಬೈಕ್ ಸವಾರ ಬೈಕ್ ನ್ನು ಉರ್ಲಾಂಡಿ ಸಮೀಪದ ಒಳ ರಸ್ತೆಯಿಂದ ಮುಖ್ಯರಸ್ತೆಗೆ ಬರುತ್ತಿದ್ದ ವೇಳೆ ಕಾರೊಂದು ಅಡ್ಡ ಬಂದಿದ್ದು, ಕಾರನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಬೈಕ್ ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಆಟೋ ರಸ್ತೆಯಲ್ಲೇ ಪಲ್ಟಿಯಾಗಿದ್ದು, ನಜ್ಜುಗುಜ್ಜಾಗಿದೆ.
ಅಪಘಾತ ನಡೆದ ತಕ್ಷಣವೇ ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೂ ಉರ್ಲಾಂಡಿಯಿಂದ ಮುಖ್ಯರಸ್ತೆಯನ್ನು ಸಂಪರ್ಕಿಸುವ ರಸ್ತೆ ಅಪಾಯಕಾರಿಯಾಗಿದ್ದು, ಹೈವೇಯಲ್ಲಿ ವೇಗವಾಗಿ ಬರುತ್ತಿರುವ ವಾಹನಗಳು ಮತ್ತು ಒಳ ರಸ್ತೆಯಿಂದ ಮುಖ್ಯರಸ್ತೆಯನ್ನು ಸಂಪರ್ಕಿಸುವ ವಾಹನಗಳು ಪರಸ್ಪರ ಡಿಕ್ಕಿ ಹೊಡೆಯುವ ಸಂದರ್ಭಗಳು ಆಗಾಗ ಸೃಷ್ಟಿಯಾಗುತ್ತಿರುವ ಪ್ರದೇಶ ಇದಾಗಿದೆ. ಈ ಪ್ರದೇಶದಲ್ಲಿ ಅಪಘಾತವನ್ನು ತಪ್ಪಿಸಲು ಮುನ್ನೆಚ್ಚರಿಕಾ ಕ್ರಮಕೈಗೊಳ್ಳಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: