ರೈಲು ಹತ್ತುವಾಗ ಆಯತಪ್ಪಿ ಬಿದ್ದು ತಂದೆ–ಮಗಳು ಸಾವು
ರೈಲು ಹತ್ತುವಾಗ ಆಯತಪ್ಪಿ ಬಿದ್ದು ತಂದೆ-ಮಗಳು ಮೃತಪಟ್ಟ ದಾರುಣ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯ ಅಬು ರೋಡ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಭೀಮಾರಾವ್ ಎನ್ನುವವರು ಪತ್ನಿ ಹಾಗೂ ತಮ್ಮ ಅವಳಿ ಮಕ್ಕಳ ಜೊತೆ ಪಾಲಿ ಜಿಲ್ಲೆಯ ಫಲ್ನಾಗೆ ಹೊರಟಿದ್ದರು. ಸಬರಮತಿ–ಜೋಧ್ ಪುರ ಎಕ್ಸ್ ಪ್ರೆಸ್ ನಲ್ಲಿ ಜನಜಂಗುಳಿ ಹೆಚ್ಚಾಗಿದ್ದು, ರೈಲು ಹತ್ತುವಾಗ ಜಾರಿ ಬಿದ್ದಿದ್ದಾರೆ.
ತಕ್ಷಣವೇ ಜನರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























