ತಂದೆ –ಕುಟುಂಬದ ಸದಸ್ಯರ ಎದುರೇ ಸಹೋದರಿಯನ್ನು ಹತ್ಯೆ ಮಾಡಿದ ಸಹೋದರ: ನೋಡುತ್ತಾ ನಿಂತ ಕುಟುಂಬಸ್ಥರು!

ಟೋಬಾ ಟೆಕ್ ಸಿಂಗ್: ಸಹೋದರನೊಬ್ಬ ತನ್ನ ಸಹೋದರಿಯನ್ನು ಅಮಾನುಷವಾಗಿ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಪಂಜಾಬ್ ನಲ್ಲಿ ನಡೆದಿದೆ.
22 ವರ್ಷದ ಮರಿಯಾ ಹತ್ಯೆಗೀಡಾದ ಯುವತಿಯಾಗಿದ್ದಾಳೆ. ಈಕೆಯ ತಂದೆ ಹಾಗೂ ಸಹೋದರ ಯುವತಿಯ ಕತ್ತು ಹಿಸುಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಈ ಘಟನೆ ಮಾರ್ಚ್ 17—18ರಂದು ನಡೆದಿದೆ ಎನ್ನಲಾಗಿದೆ. ಸಹೋದರ ಯುವತಿಯನ್ನು ಕತ್ತು ಹಿಸುಕಿ ಕೊಲ್ಲುತ್ತಿದ್ದರೂ ತಂದೆ, ಅತ್ತಿಗೆ ಹಾಗೂ ಕುಟುಂಬದ ಇತರ ಸದಸ್ಯರು ಏನೂ ನಡೆದೇ ಇಲ್ಲ ಎನ್ನುವಂತೆ ನೋಡುತ್ತಾ ನಿಂತಿರುವ ದೃಶ್ಯ ಕಂಡು ಬಂದಿದೆ.
ಯುವತಿಯನ್ನು ಹತ್ಯೆ ಮಾಡಿದ ನಂತರ ಸದ್ದಿಲ್ಲದೇ ಸಮಾಧಿ ಮಾಡಲಾಗಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಸಹೋದರ ಹಾಗೂ ತಂದೆಯನ್ನು ಬಂಧಿಸಿದ್ದಾರೆ. ಅಲ್ಲದೇ ಕೃತ್ಯದ ವೇಳೆ ಮನೆಯಲ್ಲಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೇಲ್ನೋಟಕ್ಕೆ ಇದೊಂದು ಮರ್ಯಾದಾ ಹತ್ಯೆ ಎಂದು ಶಂಕಿಸಲಾಗಿದೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth