ಮಗಳ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ತಂದೆ ಹೃದಯಾಘಾತದಿಂದ ಸಾವು - Mahanayaka

ಮಗಳ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ತಂದೆ ಹೃದಯಾಘಾತದಿಂದ ಸಾವು

death
13/12/2022

ಉತ್ತರಖಂಡ್: ಮಗಳ ಮೆಹೆಂದಿ ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಡಾನ್ಸ್ ಮಾಡುತ್ತಿದ್ದ ತಂದೆ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉತ್ತರಾಖಂಡ್‌ ನ ಅಲ್ಮೋರಾದಲ್ಲಿ ಭಾನುವಾರ ನಡೆದಿದೆ.

ಮಗಳ ಮೆಹೆಂದಿಯಲ್ಲಿ ಸಂಬಂಧಿಕರೊಂದಿಗೆ ವಧುವಿನ ತಂದೆ ಸಂತಸದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.

ತಕ್ಷಣವೇ ಅವರನ್ನು ಕುಟುಂಬಸ್ಥರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ತಂದೆಯ ನಿಧನದ ನಂತರ ಮದುವೆ ಸಮಾರಂಭ ಸರಳವಾಗಿ ನೆರವೇರಿದೆ. ಸೋದರ ಮಾವ ಕನ್ಯದಾನವನ್ನು ಮಾಡಿದ್ದಾರೆ.

ಇನ್ನೂ ಕೊವಿಡ್ ಬಳಿಕ ಕುಸಿದು ಬಿದ್ದು ಮೃತಪಡುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದು, ಹಲವಾರು ಅನುಮಾನಗಳಿಗೆ, ಆತಂಕಗಳಿಗೆ ಕಾರಣವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ