ಮಗಳಿಗೆ ಕಿರುಕುಳ ನೀಡುತ್ತಿದ್ದ ಅಳಿಯನನ್ನ ರಾಡ್‌ನಿಂದ ಹೊಡೆದು ಕೊಂದ ಮಾವ!
ಶಿವಮೊಗ್ಗ: ಮಗಳಿಗೆ ನಿರಂತರವಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಅಳಿಯನನ್ನು ಮಾವ ಹಾಗೂ ಆತನ ಸಂಬಂಧಿಕರು ಸೇರಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ನಡೆದಿದೆ.
ಘಟನೆಯ ವಿವರ: ಶಿವಮೊಗ್ಗದ ವಿನೋಬನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಇರುವ ಶ್ರೀನಿಧಿ ವೈನ್ ಶಾಪ್ ಮುಂದೆ ಈ ಘಟನೆ ನಡೆದಿದೆ. ಅರುಣ್ (ಕೊಲೆಯಾದ ವ್ಯಕ್ತಿ) ವೈನ್ ಶಾಪ್ ಮುಂದೆ ನಿಂತಿದ್ದಾಗ, ಅಲ್ಲಿಗೆ ಬಂದ ಇಬ್ಬರು ವ್ಯಕ್ತಿಗಳು ಕಬ್ಬಿಣದ ರಾಡ್‌ನಿಂದ ಆತನ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಅರುಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಕೊಲೆಗೆ ಕಾರಣ: ಅರುಣ್ ಹಾಗೂ ಯಶಸ್ವಿನಿ ಎಂಬುವವರು ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇವರಿಗೆ ಒಂದು ಮಗು ಕೂಡ ಇದೆ. ಆದರೆ, ಅರುಣ್‌ಗೆ ಗಾಂಜಾ ಸೇವನೆ ಹಾಗೂ ಕುಡಿತದ ಚಟವಿತ್ತು ಎನ್ನಲಾಗಿದೆ. ಕುಡಿದು ಬಂದು ಪತ್ನಿಗೆ ಪದೇ ಪದೇ ದೌರ್ಜನ್ಯ ಎಸಗುತ್ತಿದ್ದರಿಂದ ಬೇಸತ್ತ ಯಶಸ್ವಿನಿ ಕಳೆದ ಮೂರು ತಿಂಗಳಿನಿಂದ ತವರು ಮನೆಯಲ್ಲಿದ್ದರು. ಅಲ್ಲದೆ, ಅರುಣ್ ಪತ್ನಿಯ ಮನೆಯವರಿಗೆ “ನಿಮ್ಮ ಇಡೀ ಕುಟುಂಬವನ್ನೇ ಟಾರ್ಗೆಟ್ ಮಾಡುತ್ತೇನೆ” ಎಂದು ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.
ತಮ್ಮ ಮಗಳಿಗೆ ನೀಡುತ್ತಿದ್ದ ಕಿರುಕುಳದಿಂದ ರೋಸಿಹೋಗಿದ್ದ ತಂದೆ ತಿಪ್ಪೇಶ್ ಹಾಗೂ ಯಶಸ್ವಿನಿಯ ಸೋದರಮಾವ ಲೋಕೇಶ್ ಸೇರಿ ಅರುಣ್‌ನನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ನಡೆಸಿದ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಅವರ ಪತ್ತೆಗಾಗಿ ಜಾಲ ಬೀಸಿದ್ದಾರೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























