ಅಪ್ರಾಪ್ತ ಮಗಳನ್ನು ಹಣದ ಆಸೆಗೆ ವೇಶ್ಯಾವಾಟಿಕೆಗೆ ನೂಕಲು ಯತ್ನಿಸಿದ ತಂದೆ!: 10ಕ್ಕೂ ಅಧಿಕ ಆರೋಪಿಗಳಿಂದ ಲೈಂಗಿಕ ದೌರ್ಜನ್ಯ!
ಚಿಕ್ಕಮಗಳೂರು : ಹಣದ ಆಸೆಗೆ ತಂದೆಯೇ ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ನೂಕಲು ಯತ್ನಿಸಿದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರು ಹೋಬಳಿಯ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ.
ತಾಯಿ ಇಲ್ಲದ 16 ವರ್ಷದ ಬಾಲಕಿಯನ್ನು ತಂದೆ ಹಾಗೂ ಅಜ್ಜಿ ಸೇರಿ ಹಣಕ್ಕಾಗಿ ವೇಶ್ಯಾವಾಟಿಕೆಗೆ ಬಳಸಿಕೊಂಡ ಆರೋಪ ಕೇಳಿಬಂದಿದೆ. ಆರೋಪಗಳ ಪ್ರಕಾರ, ಭರತ್ ಶೆಟ್ಟಿ ಎಂಬ ವ್ಯಕ್ತಿಯೊಂದಿಗೆ ಬಾಲಕಿಯನ್ನು ಮಂಗಳೂರಿಗೆ ಕರೆದೊಯ್ದು, ಆರು ದಿನಗಳ ಕಾಲ 10ಕ್ಕೂ ಹೆಚ್ಚು ಜನರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಲಾಗಿದೆ ಎನ್ನಲಾಗಿದೆ.
ಪಿರಿಯಡ್ಸ್ ಅವಧಿಯಲ್ಲಿಯೂ ಬಾಲಕಿಯನ್ನು ಬಲವಂತವಾಗಿ ಲೈಂಗಿಕ ಕೃತ್ಯಕ್ಕೆ ಒಳಪಡಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ. ಮಂಗಳೂರಿನಿಂದ ಊರಿಗೆ ಮರಳಿದ ಬಳಿಕ ನೊಂದ ಬಾಲಕಿ ತನ್ನ ಚಿಕ್ಕಪ್ಪನಿಗೆ ಹಾಗೂ ಅತ್ತೆಗೆ ವಿಷಯ ತಿಳಿಸಿದ್ದು, ಅವರ ಮೂಲಕ ಬೀರೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ದೂರು ದಾಖಲಿಸಿಕೊಂಡ ಬೀರೂರು ಪೊಲೀಸರು ಬಾಲಕಿಯ ತಂದೆ, ಅಜ್ಜಿ ಹಾಗೂ ಭರತ್ ಶೆಟ್ಟಿ ಸೇರಿದಂತೆ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























