ಹಣದಾಸೆಗೆ ಮಗುವನ್ನು ಮಾರಾಟ ಮಾಡಿದ ತಂದೆ ಅರೆಸ್ಟ್!

ಕೋಲಾರ: ಹಣದಾಸೆಗೆ ತಂದೆಯೇ ಗಂಡು ಮಗುವನ್ನು ಮಾರಾಟ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಗಾರಪೇಟೆ ನಗರ ನಿವಾಸಿ ಮುನಿರಾಜು ಬಂಧಿತ ಆರೋಪಿಯಾಗಿದ್ದು, ಈತ ತನ್ನ ಮಗುವನ್ನು ಕೆರೆಕೋಡಿ ನಿವಾಸಿಯ ವಲ್ಲಿ ಎಂಬ ಮಹಿಳೆಗೆ ಹಣಕ್ಕಾಗಿ ಮಾರಾಟ ಮಾಡಿದ್ದಾನೆ ಎಂದು ಮಗುವಿನ ತಾಯಿ, ಆರೋಪಿಯ ಪತ್ನಿ ಪವಿತ್ರ ದೂರು ನೀಡಿದ್ದಾರೆ.
ನನ್ನ ಮಗುವನ್ನು ವಾಪಸ್ ಕೊಡಿಸಿ ಎಂದು ಪವಿತ್ರಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ , ಮಹಿಳಾ ಆಯೋಗ ಮತ್ತು ಬಂಗಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಂಗಾರಪೇಟೆ ನಗರ ನಿವಾಸಿಗಳಾದ ಮುನಿರಾಜು ಹಾಗೂ ಪವಿತ್ರ ದಂಪತಿಗಳಿಗೆ 2023ರ ಜೂನ್ 21ರಂದು ಗಂಡು ಮಗು ಜನಿಸಿತ್ತು. ಇದೀಗ ಸಾಲ ತೀರಿಸುವ ನೆಪವೊಡ್ಡಿ ಆರೋಪಿಯು ಮಗುವನ್ನು ಮಾರಾಟ ಮಾಡಿದ್ದಾನೆ ಎಂದು ಹೇಳಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth