ಫಾಝಿಲ್‌ ಕೊಲೆ ಪ್ರಕರಣ: ಆರೋಪಿಗಳಿಗೆ ಮನೆಯಲ್ಲಿ ಆಶ್ರಯ ನೀಡಿದ್ದ ಆರೋಪಿಯ ಬಂಧನ - Mahanayaka
5:00 AM Thursday 29 - January 2026

ಫಾಝಿಲ್‌ ಕೊಲೆ ಪ್ರಕರಣ: ಆರೋಪಿಗಳಿಗೆ ಮನೆಯಲ್ಲಿ ಆಶ್ರಯ ನೀಡಿದ್ದ ಆರೋಪಿಯ ಬಂಧನ

harshith
17/08/2022

ಸುರತ್ಕಲ್: ಮಂಗಳೂರಿನ ಸುರತ್ಕಲ್‌ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಂಟ್ವಾಳ ತಾಲೂಕಿನ ಹರ್ಷಿತ್ (28) ಎಂದು ಗುರುತಿಸಲಾಗಿದೆ.  ಈತ ಆರೋಪಿಗಳು ಕೃತ್ಯ ನಡೆಸಿದ ಬಳಿಕ ಅವರನ್ನು ಇನ್ನೊಂದು ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಆಶ್ರಯ‌ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಕರೆದುಕೊಂಡು ಹೋಗಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ 28ರಂದು ರಾತ್ರಿ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ರನ್ನು ದುಷ್ಕರ್ಮಿಗಳು ತಲ್ವಾರ್ ಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು.

ಪ್ರಕರಣ ಸಂಬಂಧ ಈಗಾಗಲೇ ಕೃತ್ಯದಲ್ಲಿ ನೇರ ಭಾಗಿಯಾಗಿದ್ದ 6  ಮಂದಿ ಹಾಗೂ ಕೃತ್ಯ ನಡೆಸಲು ಕಾರು ನೀಡಿದ್ದ ಓರ್ವ ಸೇರಿ ಒಟ್ಟು ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹರ್ಷಿತ್ ಬಂಧನದೊಂದಿಗೆ ಪ್ರಕರಣದಲ್ಲಿ ಒಟ್ಟು 8 ಮಂದಿ ಬಂಧನಕ್ಕೊಳಗಾದಂತಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ