4:12 AM Wednesday 28 - January 2026

ಎಫ್ ಡಿಎ  ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಪ್ರಮುಖ ಆರೋಪಿಯ ಬಂಧನ

17/02/2021

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ  ಶಿವಲಿಂಗ ಪಾಟೀಲ್ ನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಈ ಸಂಬಂಧ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದು, ಎಫ್ ಡಿಎ  ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಿವಲಿಂಗ ಪಾಟೀಲ್ ನನ್ನು ಬೆಳಗಾವಿಯಲ್ಲಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆರೋಪಿಯು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಒಂದು ವರ್ಷದ ಹಿಂದೆ ಸೆಂಟರ್ ಮುಚ್ಚಿದ್ದನು. ಈಗಾಗಲೇ ಬಂಧಿತ ಆರೋಪಿ ರಾಚಪ್ಪನಿಂದ ಪ್ರಶ್ನೆ ಪತ್ರಿಕೆ ತರಿಸಿಕೊಳ್ಳುತ್ತಿದ್ದನು. ಆ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಅಭ್ಯರ್ಥಿಗಳಿಗೆ ನೀಡುತ್ತಿದ್ದುದಾಗಿ ತಿಳಿಸಿದ್ದಾರೆ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version