ಎಫ್‍ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಅಧಿಕಾರಿಗಳ ಅಮಾನತು | ಸಮಗ್ರ ತನಿಖೆಗೆ ಆದೇಶ - Mahanayaka

ಎಫ್‍ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಅಧಿಕಾರಿಗಳ ಅಮಾನತು | ಸಮಗ್ರ ತನಿಖೆಗೆ ಆದೇಶ

24/01/2021

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ)ದಲ್ಲಿ ಪ್ರಥಮ ದರ್ಜೆ ಸಹಾಯಕ (ಎಫ್‍ ಡಿಎ) ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ನಡೆದಿದ್ದು, ಈ ಪ್ರಕರಣದಲ್ಲಿ ಶಾಮೀಲಾಗಿರುವ ಅಧಿಕಾರಿಗಳನ್ನ ಬಂಧಿಸಲಾಗಿದ್ದು, ಅವರನ್ನು ಸೇವೆಯಿಂದಲೇ ವಜಾ ಮಾಡಲು ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ.

ಇನ್ನೂ ಈ ಸಂಬಂಧ ಸಮಗ್ರ ತನಿಖೆಗೆ ಅವರು ಆದೇಶಿಸಿದ್ದಾರೆ.  ಈಗಾಗಲೇ ಕೆಪಿಎಸ್‍ಸಿ ಅಕಾರಿಗಳ ಜತೆ ಪ್ರಕರಣ ಸಂಬಂಧ ಮಾಹಿತಿ ಪಡೆದಿದ್ದೇನೆ. ಯಾರು ಶಾಮೀಲಾಗಿದ್ದಾರೋ ಅವರನ್ನು ಅಮಾನತು ಮಾಡಲಾಗುವುದು. ಅಗತ್ಯಬಿದ್ದರೆ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ನಡೆಯಬೇಕಾಗಿದ್ದ ಎಫ್‍ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ನಿನ್ನೆ ಸೋರಿಕೆಯಾಗಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೆಪಿಎಸ್‍ಸಿ ಕಚೇರಿಯ ಎಫ್‍ ಡಿಎ ರಮೇಶ್, ವಾಣಿಜ್ಯ ತೆರಿಗೆ ಇನ್ಸ್‍ಪೆಕ್ಟರ್ ಕೂಡ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.

ವಾಣಿಜ್ಯ ತೆರಿಗೆ ವಿಚಕ್ಷಣಾ ಇನ್ಸ್‍ಪೆಕ್ಟರ್ ಆಗಿರುವ ಚಂದ್ರು ಕೋರಮಂಗಲದ ಕಮರ್ಷಿಯಲ್ ಟ್ಯಾಕ್ಸ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆರೋಪಿ ಚಂದ್ರು ಪ್ರಶ್ನೆ ಪತ್ರಿಕೆ ಪಡೆದು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

happy birthday

ಇತ್ತೀಚಿನ ಸುದ್ದಿ