ಬಂಧನದ ಭೀತಿ: ಅಜ್ಞಾತ ಸ್ಥಳಕ್ಕೆ ತೆರಳಿದ್ರಾ ಹೆಚ್.ಡಿ.ರೇವಣ್ಣ? - Mahanayaka

ಬಂಧನದ ಭೀತಿ: ಅಜ್ಞಾತ ಸ್ಥಳಕ್ಕೆ ತೆರಳಿದ್ರಾ ಹೆಚ್.ಡಿ.ರೇವಣ್ಣ?

revanna prajwal
29/04/2024


Provided by

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಹೊಳೆ ನರಸೀಪುರದಲ್ಲಿ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಹಾಗೂ ಪ್ರಜ್ವಲ್​ ರೇವಣ್ಣ ವಿರುದ್ದ ಎಫ್ ​ಐಆರ್​ ದಾಖಲಾಗಿದ್ದು, ಇದೀಗ ಇಬ್ಬರೂ ಬಂಧನದ ಭೀತಿ ಎದುರಿಸುತ್ತಿದ್ದಾರೆ.

ಅತ್ತ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ತಲೆಮರೆಸಿಕೊಂಡಿದ್ದರೆ, ಇತ್ತ ಪ್ರಕರಣದ A1 ಆರೋಪಿ ಹೆಚ್.ಡಿ.ರೇವಣ್ಣ  ಬಂಧನದ ಭೀತಿಯಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ.

ಸರ್ಕಾರ ಎಸ್ ​ಐಟಿ ತನಿಖಾ ತಂಡವನ್ನು ರಚಿಸಿದ್ದು ಹೊಳೆನರಸೀಪುರದಲ್ಲೂ ಎಫ್ ಐಆರ್ ದಾಖಲಾಗಿದೆ. ಬಂಧನ ಭೀತಿಯಲ್ಲಿ ಹೊಳೆನರಸಿಪುರದ ಮನೆಯಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್ ರೇವಣ್ಣ  ಪೆನ್ ಡ್ರೈವ್ ಪ್ರಕರಣ ತೀವ್ರಗೊಳ್ಳುತ್ತಿದ್ದಂತೆಯೇ ಮತ ಚಲಾಯಿಸಿ ವಿದೇಶಕ್ಕೆ ಎಸ್ಕೇಪ್ ಆಗಿದ್ದರು.

ಪೆನ್​ ಡ್ರೈವ್ ಪ್ರಕರಣ ಸಂಬಂಧ ಮನೆಕೆಲಸದಾಕೆ ನೀಡಿದ ದೂರಿನಡಿಯಲ್ಲಿ ಮಾಜಿ ಸಚಿವ ಹೆಚ್.​ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಮನೆ ಕೆಲಸದಾಕೆಗೆ ದೈಹಿಕ ಹಾಗೂ ಮಾನಸಿಕ ಭಯವಿರುವ ಕಾರಣ ದೂರು ನೀಡಲು ವಿಳಂಬವಾಗಿರುವುದಾಗಿ ಸಂತ್ರಸ್ತೆ ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ