ಸಿಎಂ ಸಿದ್ದರಾಮಯ್ಯನವರಿಗೆ ಸಿಬಿಐ ತನಿಖೆಯ ಭೀತಿ! - Mahanayaka

ಸಿಎಂ ಸಿದ್ದರಾಮಯ್ಯನವರಿಗೆ ಸಿಬಿಐ ತನಿಖೆಯ ಭೀತಿ!

c.m siddaramaya
05/11/2024


Provided by

ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ ಸಿಬಿಐ ತನಿಖೆಯ ಭೀತಿ ಆರಂಭಗೊಂಡಿದೆ.

ದೂರುದಾರ ಸ್ನೇಹಮಯಿ ಕೃಷ್ಣ, ತನಗೆ ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆ ಇಲ್ಲ. ಸಿಬಿಐ ತನಿಖೆಯಲ್ಲಿ ನಂಬಿಕೆ ಇದೆ. ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಒತ್ತಾಯಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ವರದಿಗಳ ಪ್ರಕಾರ  ಇಂದು ಅರ್ಜಿ ವಿಚಾರಣೆ ನಡೆಯಲಿದೆ.  ಹೈಕೋರ್ಟ್ ಸಿಬಿಐ ತನಿಖೆಗೆ ಒಪ್ಪಿದರೆ ಲೋಕಾಯುಕ್ತ ತನಿಖೆ ಬದಲು ಮುಡಾ ಹಗರಣದ ತನಿಖೆಯನ್ನು ಸಿಬಿಐ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಇಂದಿನ ರಿಟ್ ಅರ್ಜಿ ವಿಚಾರಣೆ ಮಹತ್ವ ಪಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ