ಹೆಚ್.ಡಿ.ರೇವಣ್ಣಗೂ ಅನರ್ಹತೆಯ ಭೀತಿ: ಪ್ರಜ್ವಲ್ ರೇವಣ್ಣ ಅನರ್ಹತೆಯ ಬೆನ್ನಲ್ಲೇ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್!

04/09/2023
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ಇದೀಗ ಪ್ರಜ್ವಲ್ ತಂದೆ ಶಾಸಕ ಹೆಚ್.ಡಿ.ರೇವಣ್ಣ ಅವರ ಶಾಸಕ ಸ್ಥಾನಕ್ಕೂ ಕಂಟಕ ಎದುರಾಗಿದೆ.
ಪ್ರಜ್ವಲ್ ರೇವಣ್ಣ ಅನರ್ಹತೆಯ ಬೆನ್ನಲ್ಲೇ ಹೆಚ್.ಡಿ.ರೇವಣ್ಣ ಅವರಿಗೂ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಶಾಸಕ ಅಸಿಂಧುತ್ವ ನಡೆಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದೆ. ಇದೀಗ ವಿಧಾನ ಸಭಾ ಕಾರ್ಯದರ್ಶಿ ಮೂಲಕ ಹೈಕೋರ್ಟ್ ಸಮನ್ಸ್ ನೀಡಿದ್ದು, ಏಕಸದಸ್ಯ ಪೀಠದಿಂದ ಈ ಆದೇಶ ಬಂದಿದೆ.
ಚುನಾವಣಾ ಅಕ್ರಮ ವಿಚಾರವಾಗಿ ವಕೀಲ ದೇವರಾಜೇಗೌಡ ಅವರು ಅರ್ಜಿ ಸಲ್ಲಿಸಿದ್ದರು. ದೇವರಾಜೇಗೌಡ ಅವರು ರೇವಣ್ಣ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದರು. ಅವರು ಸಲ್ಲಿಸಿದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಕೋರ್ಟ್ ರೇವಣ್ಣ ಸೇರಿದಂತೆ ಪ್ರಕರಣದ ಎಲ್ಲರಿಗೂ ಸಮನ್ಸ್ ಜಾರಿ ಮಾಡಿದೆ.