ಚುನಾವಣೆ ವೇಳೆ ಮಳೆಯಿಂದ ಅಡ್ಡಿಯಾಗುವ ಆತಂಕ: ಅಪ್ಪಳಿಸಲಿದೆ ಮೋಚಾ ಚಂಡಮಾರುತ - Mahanayaka

ಚುನಾವಣೆ ವೇಳೆ ಮಳೆಯಿಂದ ಅಡ್ಡಿಯಾಗುವ ಆತಂಕ: ಅಪ್ಪಳಿಸಲಿದೆ ಮೋಚಾ ಚಂಡಮಾರುತ

hurricane mocha
04/05/2023

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇ 8 ರಿಂದ 11ರ ವೇಳೆಗೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಕರ್ನಾಟಕ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಮಳೆಯಿಂದ ಅಡ್ಡಿಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮೇ 10ರ ವೇಳೆಗೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ADS

ರಾಜ್ಯ ವಿಧಾನ ಸಭಾ ಚುನಾವಣೆಯು ಮೇ 10ರಂದು ನಡೆಯಲಿದೆ. ಮತದಾನದ ವೇಳೆ ಮಳೆಯಿಂದ ತೊಂದರೆಯಾಗುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ.

ಚಂಡಮಾರುತದಿಂದ ಮಳೆ ಹೆಚ್ಚಾದಲ್ಲಿ ರಾಜ್ಯದಲ್ಲಿ ಚುನಾವಣೆ ಪ್ರಚಾರ, ಮತದಾನಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ