ಮಹಿಳಾ ಪೇದೆ ಮೇಲೆ ಸೇನಾ ಅಧಿಕಾರಿಯಿಂದ ಅತ್ಯಾಚಾರ! - Mahanayaka

ಮಹಿಳಾ ಪೇದೆ ಮೇಲೆ ಸೇನಾ ಅಧಿಕಾರಿಯಿಂದ ಅತ್ಯಾಚಾರ!

stop rape
20/04/2025


Provided by

ಭೋಪಾಲ್: ಮಹಿಳಾ ಪೊಲೀಸ್ ಪೇದೆಯೊಬ್ಬರ ಮೇಲೆ ಸೇನಾ ಅಧಿಕಾರಿ ಅತ್ಯಾಚಾರವಸೆಗಿರುವ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಈ ಪ್ರಕರಣ ಸಂಬಂಧ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಿಯೋಜನೆಗೊಂಡಿರುವ ಲೆಫ್ಟಿನೆಂಟ್ ಕರ್ನಲ್ ವರುಣ್ ಪ್ರತಾಪ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

42 ವರ್ಷದ ಮಹಿಳಾ ಪೊಲೀಸ್ ಪೇದೆ ನೀಡಿದ ದೂರಿನ ಆಧಾರದ ಮೇಲೆ ಸೇನಾ ಅಧಿಕಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 69 (ಮದುವೆಯ ಸುಳ್ಳು ಭರವಸೆ ನೀಡಿ ಲೈಂಗಿಕ ಸಂಭೋಗ) ಮತ್ತು 351 (2) (ಅಪರಾಧ ಬೆದರಿಕೆ) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಭೋಪಾಲ್ ಮಹಿಳಾ ಪೊಲೀಸ್ ಭದ್ರತಾ ಸಹಾಯಕ ಕಮಿಷನರ್ ನಿಧಿ ಸಕ್ಸೇನಾ, ಆರೋಪಿ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದು, ಆತ ಕರ್ತವ್ಯ ನಿರ್ವಹಿಸುತ್ತಿರುವ ಸೇನಾ ಘಟಕಕ್ಕೆ ಅತ್ಯಾಚಾರ ಕುರಿತು ಮಾಹಿತಿ ನೀಡಿದ್ದೇವೆ. ಅವರು ವಿಚಾರಣೆಗೆ ಬಂದರೆ ಒಳ್ಳೆಯದು , ಇಲ್ಲದಿದ್ದರೆ ಬಂಧನ ಕಾರ್ಯವಿಧಾನವನ್ನು ಅನುಸರಿಸಬೇಕಾಗುತ್ತದೆ ಎಂದು ಸಕ್ಸೇನಾ ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ