ಮಹಿಳಾ ನಿಲಯದ ನಿವಾಸಿ ಸಾವು: ಅಂತಿಮ ಗೌರವ ಸಲ್ಲಿಸಿ ಅಂತ್ಯಕ್ರಿಯೆ

ನಿಟ್ಟೂರು ರಾಜ್ಯ ಮಹಿಳಾ ನಿಲಯದ ನಿವಾಸಿಯಾದ ದುರ್ಗಿ ಯಾನೆ ಸುನೀತ ಅವರು, ರವಿವಾರ ಮೃತಪಟ್ಟಿದ್ದರು. ಮೃತರ ಅಂತ್ಯಸಂಸ್ಕಾರವನ್ನು ರಾಜ್ಯ ಮಹಿಳಾ ನಿಲಯದ ಅಧಿಕಾರಿ ವರ್ಗ, ಸಿಬ್ಬಂದಿಗಳು ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ಸೋಮವಾರ ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಅಂತಿಮ ಗೌರವ ಸಲ್ಲಿಸಿ ನಡೆಸಿದರು.
ರಾಜ್ಯ ಮಹಿಳಾ ನಿಲಯದ ಲೀಲಾವತಿ ಅಧೀಕ್ಷಕರು, ಮಾಲಿನಿ, ಸುರಕ್ಷ , ಪ್ರೀತಿ, ಸುಜಾತ, ಪ್ರೇಮ. ಹೆಡ್ ಕಾನ್ಸ್ಟೇಬಲ್ ಸುಷ್ಮಾ, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸೋನಿ, ಪ್ರದೀಪ್ ಭಾಗಿಯಾಗಿದ್ದರು. ಪ್ಲವರ್ ವಿಷ್ಣು, ನಗರ ಸಭೆಯ, ಯತೀಶ್ ಕಡಿಯಾಳಿ, ಸಹಕರಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw